ಸೋಮವಾರ, ಆಗಸ್ಟ್ 2, 2021
27 °C

ಧಮ್ ಇರೋದಕ್ಕೆ ಸರ್ಕಾರ ರಚಿಸಿದ್ದು: ಸಿದ್ದರಾಮಯ್ಯಗೆ ಈಶ್ವರಪ್ಪ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಧಮ್ ಇರೋದಕ್ಕೆ ಸರ್ಕಾರ ರಚಿಸಿದ್ದೇವೆ. 25 ಸಂಸದ ಸ್ಥಾನ ಗೆದ್ದಿದ್ದೇವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಶುಕ್ರವಾರ ನಗರದಲ್ಲಿ ತಿರುಗೇಟು ನೀಡಿದರು.

‘ಜಾತಿ ಹೆಸರಿನಲ್ಲಿ ಕೆಟ್ಟ ರಾಜಕಾರಣ ಮಾಡುವ ನೀವು ಕುರುಬರಿಗೆ ಎಷ್ಟು ಸೀಟ್ ಕೊಟ್ಟೀರಿ. ಶಂಕರ್, ಎಂ.ಟಿ.ಬಿ.ನಾಗರಾಜ್ ಕುರುಬರು ಅಂತ ಅವಕಾಶ ಕೊಟ್ಟಿಲ್ಲ. ಸರ್ಕಾರ ರಚಿಸೋಕೆ ಕಾರಣರಾದವರು ಎಂದು ಕೊಟ್ಟಿದ್ದೇವೆ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ತಿಳಿಸಿದರು.

‘ಧಮ್ ಇದ್ದೋರು ಮುಖ್ಯಮಂತ್ರಿಯಿದ್ದಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದೀರಿ. ಕೀಳು ಭಾಷೆ ಬಳಸಿರೋದಕ್ಕೆ ರಾಜ್ಯದ ಜನರ ಕ್ಷಮೆ ಕೋರಿ’ ಎಂದು ಈಶ್ವರಪ್ಪ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.

ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪಗೆ ಧಮ್ ಇಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

‘ಎಚ್.ವಿಶ್ವನಾಥ್‌ಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು