ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರ್ತಿಯಾಗುವತ್ತ ಕಬಿನಿ ಜಲಾಶಯ: ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ

Last Updated 16 ಜುಲೈ 2021, 3:57 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆ ಉಂಟಾಗಿದೆ‌.ಈಗಾಗಲೇ ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಪ್ರವಾಹದ ಮುನ್ನೆಚ್ಚರಿಕೆ ನೀಡಿದೆ.

ಒಳ ಹರಿವಿನ ಪ್ರಮಾಣವು 19,632 ಕ್ಯುಸೆಕ್‌ಗೆ ಏರಿಕೆಯಾಗಿದೆ. 2,284 ಗರಿಷ್ಠ ಅಡಿಯ ಈ ಜಲಾಶಯವು 2,280.22 ಅಡಿಗೆ ತಲುಪಿದೆ. ನದಿಗೆ 8,552 ಕ್ಯುಸೆಕ್‌ನಷ್ಟು ನೀರನ್ನು ಹೊರ ಬಿಡಲಾಗುತ್ತಿದೆ.

ಸಚಿವರು ಮೈಸೂರು ನಗರದಲ್ಲಿ ಪ್ರದಕ್ಷಿಣೆ

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ನಗರದ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT