ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಕಬಿನಿ ಜಲಾಶಯದ ಹೊರ ಹರಿವಿನಲ್ಲಿ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿ‌ನ ಕಬಿನಿ ಜಲಾಶಯದ ಹೊರಹರಿವಿನ ಪ್ರಮಾಣವನ್ನು 60 ಸಾವಿರ ಕ್ಯುಸೆಕ್ ಗೆ ಏರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ 10.30 ರಿಂದ ಈ ಪ್ರಮಾಣದಲ್ಲಿ ನೀರು ಹರಿಯಲಿದ್ದು, ರಾತ್ರಿ ಇಲ್ಲವೆ ಶನಿವಾರ ನಂಜನಗೂಡಿನ ಮಲ್ಲನಮೂಲೆ ಮಠ ಸಂಪೂರ್ಣ ಮುಳುಗುವ ಭೀತಿ ಎದುರಾಗಿದೆ. ಮಠದಲ್ಲಿ ಇರುವವರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ಪರಶುರಾಮದೇಗುಲ, ಸ್ನಾನಘಟ್ಟ ಹಾಗೂ ಹದಿನಾರುಕಾಲು ಮಂಟಪಗಳು ಭಾಗಶಃ ಮುಳುಗಿವೆ. ಹಳ್ಳದಕೇರಿಗೆ ನೀರು ನುಗ್ಗಿದೆ. ಸುತ್ತೂರು ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರವನ್ನು ನಿರ್ಬಂಧಿಸಲಾಗಿದೆ. 

ಮೈಸೂರು ಜಿಲ್ಲೆಯಲ್ಲಿ ಶುಕ್ರವಾರ ನಸುಕಿನಿಂದ ಮಳೆ ಸುರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು