ಭಾನುವಾರ, ಜೂನ್ 20, 2021
26 °C
₹ 50 ಕೋಟಿ ಅನುದಾನಕ್ಕೆ ಅನುಮೋದನೆ: ಎಸ್‌.ಟಿ.ಸೋಮಶೇಖರ್

ಕಪಿಲಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಟೆಂಡರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಎಚ್‌.ಡಿ.ಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹ 50.30 ಕೋಟಿ ವೆಚ್ಚದ ಎರಡು ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಟೆಂಡರ್ ಸಹ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಕಬಿನಿ ಅಣೆಕಟ್ಟೆಯ ಕೆಳಭಾಗದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗಾಗಿ ₹ 25 ಕೋಟಿ ಮೊತ್ತದ ಅಂದಾಜಿಗೆ ಮುಖ್ಯಮಂತ್ರಿ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ ಎಂದಿದ್ದಾರೆ.‌

ಕಬಿನಿ ಜಲಾಶಯದ ಕೂಡು ರಸ್ತೆಯನ್ನು ಸಿಮೆಂಟ್ ರಸ್ತೆಯಾಗಿ ನಿರ್ಮಿಸುವ ಕೊಲ್ಲೆಗೌಡನಹಳ್ಳಿ ವೃತ್ತದಿಂದ ಬಿದರಹಳ್ಳಿ ವೃತ್ತದವರೆಗೆ, ₹ 25.30 ಕೋಟಿ ಮೊತ್ತದ ಕಾಮಗಾರಿಗೆ 2019-20ನೇ ಸಾಲಿನ ಪರಿಶಿಷ್ಟ ಜಾತಿ/ಪಂಗಡ ಉಪ ಯೋಜನೆಯಡಿ ಕಾವೇರಿ ನೀರಾವರಿ ನಿಗಮಕ್ಕೆ ಒದಗಿಸಲಾದ ಅನುದಾನದಡಿ ಕೂಡಲೇ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆಗೆ ಅನುಮೋದನೆಯನ್ನು ಯಡಿಯೂರಪ್ಪ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.