ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಹಾನಿಗೆ ಪರಿಹಾರ ನೀಡಲು ವಾಟಾಳ್ ನಾಗರಾಜ್ ಒತ್ತಾಯ

Last Updated 20 ನವೆಂಬರ್ 2021, 9:31 IST
ಅಕ್ಷರ ಗಾತ್ರ

ಮೈಸೂರು: ರಾಜ್ಯದಲ್ಲಿ ಮಳೆಯಿಂದ ಬೆಳೆ ಹಾನಿಯಾಗಿದ್ದು ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಲ್ಲಿನ ಜಯಚಾಮರಾಜ ಒಡೆಯರ್ ವೃತ್ತದಲ್ಲಿ (ಹಾರ್ಡಿಂಚ್) ಶನಿವಾರ ಪ್ರತಿಭಟನೆ ನಡೆಸಿದರು.

ನಂತರ ಮಾತನಾಡಿದ ಅವರು,ರಾಜ್ಯದಲ್ಲಿ ಎಂದೂ ಕಂಡರಿಯದ ಮಳೆ ಸುರಿದು, ನಷ್ಟ ಆಗಿದೆ. ನಷ್ಟದ ಪರಿಹಾರ ನೀಡಬೇಕು. ಈ ಬಗ್ಗೆ ಸಮಗ್ರ ಸಮೀಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಮೃತಪಟ್ಟವರಿಗೆ ಕನಿಷ್ಟ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಒಟ್ಡು 5,000 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದರು.

ನ.23 ರಂದು ಮಧ್ಯಾಹ್ನ 12.30 ಕ್ಕೆ ವಿಧಾನಪರಿಷತ್ ಚುನಾವಣೆಯ ಮೈಸೂರು ಚಾಮರಾಜನಗರ ದ್ವಿಸದಸ್ಯ ಸ್ಥಾನದ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಾಗುವುದು‌.ವಿಧಾನ ಪರಿಷತ್ ಚಿನ್ನದ ಅಂಗಡಿ, ರಿಯಲ್ ಎಸ್ಟೇಟ್ ಮಾಡುವವರಿಗಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಬಹಳ ವಿಶಾಲವಾದ ಮನೋಭಾವ ಉಳ್ಳವರು. ಇವರಲ್ಲಿ ಹಾಗೂ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡಿ ಬೆಂಬಲ ಕೋರುತ್ತೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT