ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ವಿಜ್ಞಾನ ಸಮ್ಮೇಳನಕ್ಕೆ ಚಾಲನೆ

ನಾಲ್ವರಿಗೆ ‘ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ’
Last Updated 8 ಸೆಪ್ಟೆಂಬರ್ 2022, 19:33 IST
ಅಕ್ಷರ ಗಾತ್ರ

ಮೈಸೂರು: ‘ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ’ ಕುರಿತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ನಗರದಲ್ಲಿ ಸೆ.10ರವರೆಗೆ ಆಯೋಜಿಸಿರುವ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನಕ್ಕೆ ಗುರುವಾರ ಚಾಲನೆ ದೊರೆಯಿತು.

ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನದಿಂದ ಮಾತನಾಡಿದ ಇಸ್ರೊ ನಿವೃತ್ತ ಅಧ್ಯಕ್ಷ, ಖ್ಯಾತ ವಿಜ್ಞಾನಿ ಎ.ಎಸ್.ಕಿರಣ್‌ಕುಮಾರ್‌, ‘‍ಇತ್ತೀಚಿನ ದಿನಗಳಲ್ಲಿ ಹವಾಮಾನ ಮುನ್ಸೂಚನೆಯನ್ನು ನಿಖರವಾಗಿ ಹೇಳಲಾಗುತ್ತಿಲ್ಲ.
ಇಡೀ ಪ್ರಪಂಚದಲ್ಲಿ ಹವಾಮಾನ ವೈಪರೀತ್ಯ ಬಹಳ ದೊಡ್ಡ ಪ್ರಮಾಣದಲ್ಲಿ ಆಗುತ್ತಿರುವುದು ಇದಕ್ಕೆ ಕಾರಣ. ಇದರಿಂದಾಗಿ ಹೆಚ್ಚು ತೊಂದರೆಯಾಗು ತ್ತಿದೆ’ ಎಂದರು.

‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಅಂತರರಾಷ್ಟ್ರೀಯ ಕಂಪನಿಗಳು ಮನುಷ್ಯನ ವ್ಯಕ್ತಿತ್ವವನ್ನು ಬದಲಾಯಿಸಿ, ಕೇವಲ ಗ್ರಾಹಕರನ್ನಾಗಿ ಮಾಡಿಕೊಂಡು ಲಾಭ‌ ಪಡೆದುಕೊಳ್ಳುತ್ತಿವೆ. ನಮ್ಮ ಎಲ್ಲ ಕೆಲಸಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯವನ್ನೂ ಮಾಡಲಾಗುತ್ತಿದೆ’ ಎಂದರು.

‘ವಿಜ್ಞಾನ ಹಾಗೂ ತಂತ್ರಜ್ಞಾನವನ್ನು ಸುಸ್ಥಿರ ಅಭಿವೃದ್ಧಿಗೆ ಬಳಸಿಕೊಳ್ಳಲು ಆದ್ಯತೆ ಕೊಡಬೇಕು’ ಎಂದು ಸಲಹೆ ನೀಡಿದರು.

ಪ್ರಶಸ್ತಿ: ನಾಡಿನಲ್ಲಿ ವಿಜ್ಞಾನ ಜನಪ್ರಿಯಗೊಳಿಸಲು ಶ್ರಮಿಸಿದವರಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿ ನಿಂದ ನೀಡುವ 2022ನೇ ಸಾಲಿನ ರಾಜ್ಯಮಟ್ಟದ ‘ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ’ ಪ್ರಕಟಿಸಲಾಗಿದೆ.

ಮೈಸೂರು ಸಿಎಫ್‌ಟಿಆರ್‌ಐ ನಿವೃತ್ತ ವಿಜ್ಞಾನಿ ಮತ್ತು ‘ಬಾಲವಿಜ್ಞಾನ’ ಮಾಸಪತ್ರಿಕೆಯ ಸಂಪಾದಕಿ ಶ್ರೀಮತಿ ಹರಿಪ್ರಸಾದ್ (ಮೈಸೂರು), ವಿಜ್ಞಾನ ಸಂವಹನಕಾರ ಪ್ರೊ.ಎಂ.ಆರ್. ನಾಗರಾಜು (ಬೆಂಗಳೂರು), ನಿವೃತ್ತ ಪ್ರಾಧ್ಯಾಪಕ ಪ್ರೊ.ಡಿ.ಆರ್.ಬಳೂರಗಿ (ವಿಜಯಪುರ) ಮತ್ತು ಶಿಕ್ಷಣ ತಜ್ಞ ಪ್ರೊ.ಬಿ.ಕೆ.ಚಳಗೇರಿ (ಕಲಬುರಗಿ) ಅವರನ್ನು ಆಯ್ಕೆ ಮಾಡಲಾಗಿದೆ.

ಸೆ.10ರಂದು ನಡೆಯುವ ಸಮ್ಮೇಳನದ ಸಮಾರೋಪದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯ ಎ.ಎನ್.ಮಹೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT