ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಸಾಹಿತಿ ಮಳಲಿ ವಸಂತಕುಮಾರ್ ಇನ್ನಿಲ್ಲ

Last Updated 18 ಮಾರ್ಚ್ 2021, 15:56 IST
ಅಕ್ಷರ ಗಾತ್ರ

ಮೈಸೂರು: ಸಾಹಿತಿ, ನಿವೃತ್ತ ಪ್ರಾಧ್ಯಾಪಕ ಮಳಲಿ ವಸಂತಕುಮಾರ್ (76) ಅವರುಅನಾರೋಗ್ಯದಿಂದ ಬೆಂಗಳೂರಿನ ತಮ್ಮ ಪುತ್ರ ರನ್ನ ಮಳಲಿ ಅವರ ನಿವಾಸದಲ್ಲಿ ಗುರುವಾರ ನಿಧನರಾದರು.

ಅವರಿಗೆ ಪತ್ನಿ ಶಾಂತಾ, ಪುತ್ರಿ ಎಂ.ವಿ.ರೂಪಾ, ಪುತ್ರ ರನ್ನ ಇದ್ದಾರೆ. ಇವರ ಮತ್ತೊಬ್ಬ ಪುತ್ರಿ ವಸು ಮಳಲಿ ಕೆಲವು ವರ್ಷಗಳ ಹಿಂದೆಯೇ ನಿಧನರಾಗಿದ್ದಾರೆ.

ಹಾಸನ ಜಿಲ್ಲೆಯ ಮಳಲಿಯವರಾದ ವಸಂತಕುಮಾರ್‌, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಬದುಕು ಆರಂಭಿಸಿದ ಇವರು, ಹಾಸನ ಮತ್ತು ಮಂಡ್ಯದ ಸ್ನಾತಕೋತ್ತರ ಕೇಂದ್ರಗಳ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಗೋಕಾಕ ಚಳವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು.

ಕಾವ್ಯ, ಕಥೆ, ನಾಟಕ, ವಿಮರ್ಶೆ, ಸಂಶೋಧನೆ, ಜಾನಪದ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಇದ್ದ ಅವರು, ಮಳಲಿ ಗಿಡ್ಡಮ್ಮ, ಹೃದಯಗಂಗೆ, ಯಮಧರ್ಮ, ಲಂಕೇಶ್ವರ, ಸ್ಥಿತ್ಯಂತರ, ರಿಕ್ತ, ಹರ್ಷ, ವಿವಕ್ಷೆ ಸೇರಿದಂತೆ 40‌ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಮೈಸೂರಿನ ಹೊರವಲಯದಲ್ಲಿರುವ ಕಳಲವಾಡಿಯಲ್ಲಿರುವ ತೋಟದಲ್ಲಿ ಶುಕ್ರವಾರ (ಮಾರ್ಚ್‌ 19) ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಮೈಸೂರಿನ ಪುರಭವನದಲ್ಲಿ ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT