ಬುಧವಾರ, ನವೆಂಬರ್ 25, 2020
18 °C

ಕಸಾಪ ಕನ್ನಡಿಗರ ಹೆಮ್ಮೆಯ ಸಂಸ್ಥೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ನಾಡಿನ ಆರೂವರೆ ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್‌’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ನಗರದಲ್ಲಿನ ಜಿಲ್ಲಾ ಕಸಾಪ ಭವನಕ್ಕೆ ಭಾನುವಾರ ಭೇಟಿ ನೀಡಿದ ಸಚಿವರು, ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಹಾಗೂ ಪದಾಧಿಕಾರಿಗಳೊಂದಿಗೆ ಕನ್ನಡ ಚಟುವಟಿಕೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು.

‘ಐತಿಹಾಸಿಕ ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಅಪಾರ. ಅವರ ದೂರದೃಷ್ಟಿ ಆಲೋಚನೆಯಿಂದ ಆರಂಭಗೊಂಡ ಕನ್ನಡ ಸಾಹಿತ್ಯ ಪರಿಷತ್‌ ನಾಡಿಗೆ ಸಲ್ಲಿಸುತ್ತಿರುವ ಸೇವೆ ದೊಡ್ಡದು’ ಎಂದು ಪ್ರಶಂಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಕಿರು ಸಭಾಂಗಣ, ಪರಿಷತ್ ಗ್ರಂಥಾಲಯ ಹಾಗೂ ಕಲಾ ಗ್ಯಾಲರಿಯನ್ನೊಳಗೊಂಡ ಕಟ್ಟಡ ಆಗಬೇಕಿದ್ದು, ಅದಕ್ಕೆ ಅನುದಾನದ ನೆರವು ನೀಡಬೇಕು ಎಂದು ಕಸಾಪ ಪದಾಧಿಕಾರಿಗಳು ಸಚಿವರಿಗೆ ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.

ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ಗುಬ್ಬಿಗೂಡು ರಮೇಶ್, ಪ್ರೊ.ಎಸ್.ಶಿವರಾಜಪ್ಪ, ಎಸ್.ನಾಗರಾಜು, ಡಾ.ಸುಧಾಕರ ಹೊಸಳ್ಳಿ ಉಪಸ್ಥಿತರಿದ್ದರು.

ಕಾಮಗಾರಿ ಪರಿಶೀಲನೆ

ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ದೇವರಾಜ ಮೊಹಲ್ಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಅಂಬೇಡ್ಕರ್ ಭವನದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ನಿಗದಿತ ವೇಳೆಗೆ ಕಾಮಗಾರಿ ಪೂರ್ಣವಾಗಿಲ್ಲ ಎಂಬ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದೇನೆ ಎಂದರು.

ಮಹಾನಗರ ಪಾಲಿಕೆ ಆಯಕ್ತ ಗುರುದತ್ ಹೆಗಡೆ, ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್, ಮುಡಾ ಅಧೀಕ್ಷಕ ಎಂಜಿನಿಯರ್ ಶಂಕರ್ ಈ ಸಂದರ್ಭದಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು