ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಂ ಮೋದಿ ಭೇಟಿ ಹಿನ್ನೆಲೆ ಹಿಂದಿ ಫ್ಲೆಕ್ಸ್‌: ಮಸಿ ಬಳಿದ ಕರವೇ ಕಾರ್ಯಕರ್ತರು

Last Updated 19 ಜೂನ್ 2022, 13:47 IST
ಅಕ್ಷರ ಗಾತ್ರ

ಬೆಂಗಳೂರು:ಮೈಸೂರು ರಸ್ತೆಯಲ್ಲಿ ಅಳವಡಿಸಲಾಗಿದ್ದ ನೂರಾರು ಹಿಂದಿ ಫ್ಲೆಕ್ಸ್‌ಗಳಿಗೆ ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾನುವಾರಸಂಜೆ 5 ಗಂಟೆಗೆ ಮಸಿ ಬಳಿದು ಪ್ರತಿಭಟಿಸಿದರು.

ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಸಚಿವ ಮುನಿರತ್ನ ನಾಯ್ಡು ಮತ್ತು ಬೆಂಬಲಿಗರು ಹಿಂದಿ ಭಾಷೆಯ ಫ್ಲೆಕ್ಸ್ ಗಳನ್ನು ಅಳವಡಿಸಿದ್ದರು.

ವಿಷಯ ತಿಳಿಯುತ್ತಿದ್ದಂತೆ, ಕರವೇ ಯುವ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಫ್ಲೆಕ್ಸ್ ಗಳಿಗೆ ಮಸಿ ಬಳಿದರು. ಪೊಲೀಸರು ಅಡ್ಡಿ ಪಡಿಸಿದರೂ ಸಹ ಫ್ಲೆಕ್ಸ್ ಗಳಿಗೆ ಮಸಿ ಬಳಿಯಲಾಯಿತು.

ಕರವೇ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ್, ಪದ್ಮನಾಭನಗರ ಕ್ಷೇತ್ರದ ಅಧ್ಯಕ್ಷ ನಿತೀಶ್ ಮನು ಗೌಡ ಸೇರಿದಂತೆ ಪ್ರಮುಖರು ಈ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡು, ಕರ್ನಾಟಕದಲ್ಲಿ ಹಿಂದಿಹೇರಿಕೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT