ಶುಕ್ರವಾರ, ಜುಲೈ 1, 2022
26 °C

ಪ್ರವಾಹ ನಿರ್ವಹಣೆಗೆ ಮಂತ್ರಿ ಮಂಡಲ ಇರಬೇಕಿತ್ತು: ಶ್ರೀನಿವಾಸಪ್ರಸಾದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ರಾಜ್ಯದಲ್ಲಿ ಉದ್ಭವಿಸಿರುವ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಮಂತ್ರಿ ಮಂಡಲ ಇರಬೇಕಿತ್ತು ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್‌ ಮಂಗಳವಾರ ಇಲ್ಲಿ ಹೇಳಿದರು.

‘ನಾನು ಹಿಂದೆ ಕಂದಾಯ ಸಚಿವನಾಗಿ ಕೆಲಸ ಮಾಡಿದ್ದೇನೆ. ಸಮಸ್ಯೆ ಏನು ಎಂಬುದು ಗೊತ್ತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮುಖ್ಯಮಂತ್ರಿ ಒಬ್ಬರೇ ಶ್ರಮಿಸುತ್ತಿದ್ದಾರೆ. ಇದೊಂದು ಅನಿರೀಕ್ಷಿತ ಘಟನೆ. ಮಂತ್ರಿ ಮಂಡಲ ರಚನೆಗೆ ಸಿದ್ಧರಾಗಿದ್ದಾಗಲೇ ಸಮಸ್ಯೆ ಉಂಟಾಗಿದೆ. ಸಚಿವರು ಇದ್ದಿದ್ದರೆ ಮತ್ತಷ್ಟು ಉತ್ತಮವಾಗಿ ನಿರ್ವಹಣೆ ಮಾಡಬಹುದಿತ್ತು’ ಎಂದು ಅಭಿಪ್ರಾಯಪಟ್ಟರು.

‘ಈಗಲೂ, ಚುನಾಯಿತ ಪ್ರತಿನಿಧಿಗಳು ರಾಜ್ಯದಾದ್ಯಂತ ಪ್ರವಾಸ ಮಾಡಿ ಜನರ ಕಷ್ಟ ಆಲಿಸುತ್ತಿದ್ದಾರೆ. ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅಧಿಕಾರಿಗಳು ಕೂಡ ಸ್ಪಂದಿಸುತ್ತಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು