ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ನಿರಾಣಿ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ; ರಸ್ತೆ ಮಾರ್ಗದಲ್ಲಿ ಮೈಸೂರಿಗೆ

Last Updated 28 ಏಪ್ರಿಲ್ 2022, 6:31 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಗುರುವಾರ ಏರ್ಪಡಿಸಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು‘ ಕಾರ್ಯಾಗಾರಕ್ಕೆ ಬರಬೇಕಿದ್ದ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್ ‌ನಲ್ಲಿ ಬೆಂಗಳೂರಿನಲ್ಲಿಯೇ ತಾಂತ್ರಿಕ ದೋಷ ಉಂಟಾಗಿದೆ.

ಹೀಗಾಗಿ ಅವರು ರಸ್ತೆ ಮಾರ್ಗದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಬರಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಅವರ ಬರುವಿಕೆಗಾಗಿ ಕಾಯದೇ ಕಾರ್ಯಾಗಾರ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT