ಶನಿವಾರ, ಜುಲೈ 24, 2021
21 °C

ಮುಂದಿನ ಸಿಎಂ ಪರಮೇಶ್ವರ್‌: ಸುತ್ತೂರು ಶಾಖಾ ಮಠದಲ್ಲಿ ಬೆಂಬಲಿಗರ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಮೈಸೂರು: ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಅವರು ಗುರುವಾರ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜತೆ ಸುಮಾರು ಒಂದು ಗಂಟೆ ಮಾತುಕತೆ ನಡೆಸಿದರು.

‘ಸುತ್ತೂರು ಶ್ರೀಗಳ ಪೂರ್ವಾಶ್ರಮದ ಮಾತೃಶ್ರೀ ಇತ್ತೀಚೆಗೆ ನಿಧನರಾಗಿದ್ದಾರೆ. ಆದ್ದರಿಂದ ಸೌಜನ್ಯದ ಭೇಟಿ ಕೊಟ್ಟಿದ್ದೇನೆ. ಈ ಭೇಟಿಗೆ ಬೇರೆ ಯಾವುದೇ ಅರ್ಥ ಕಲ್ಪಿಸಬೇಕಾಗಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಮುಂದಿನ ಸಿಎಂ ಪರಮೇಶ್ವರ್‌’ ಘೋಷಣೆ: ಪರಮೇಶ್ವರ್‌ ಅವರು ಸುತ್ತೂರು ಶಾಖಾ ಮಠಕ್ಕೆ ಬಂದಿಳಿದಾಗ ಅಲ್ಲಿ ಸೇರಿದ್ದ ಬೆಂಬಲಿಗರು, ‘ಮುಂದಿನ ಮುಖ್ಯಮಂತ್ರಿ ಪರಮೇಶ್ವರ್‌ ಅವರಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ‘ಹೌದು ಕೆಲವು ಸ್ನೇಹಿತರು ಆ ರೀತಿ ಘೋಷಣೆ ಕೂಗಿದರು. ಬೇಡಪ್ಪಾ.. ಆ ರೀತಿ ಘೋಷಣೆ ಕೂಗಬೇಡಿ ಎಂದು ಅವರನ್ನು ಸುಮ್ಮನಾಗಿಸಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು