ಬೆಂಗಳೂರು: ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ವತಿಯಿಂದ 35ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ವರಿಷ್ಠಾಧಿಕಾರಿ(ಸಿವಿಲ್), ಅಬಕಾರಿ ವರಿಷ್ಠಾಧಿಕಾರಿ ಮತ್ತು 43ನೇ ತಂಡದ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನಾ ಕಾರ್ಯಕ್ರಮ ಆರಂಭವಾಗಿದೆ.
ಕರ್ನಾಟಕ ಪೊಲೀಸ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಮಹಾ ನಿರ್ದೇಶಕರು ಪ್ರವೀಣ್ ಸೂದ್, ಪ್ರಭಾರ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪಿ.ಹರಿಶೇಖರನ್ ಅವರು ಭಾಗವಹಿಸಿದ್ದಾರೆ.
35ನೇ ತಂಡದ ಪ್ರಶಿಕ್ಷಣಾರ್ಥಿಗಳಲ್ಲಿ ಡಿವೈಎಸ್ ಪಿ ಭೂತೇಗೌಡ ಸರ್ವೋತ್ತಮ ಪ್ರಶಿಕ್ಷಣಾರ್ಥಿ ಹಾಗೂ ಸರ್ವೋತ್ತಮ ಮಹಿಳಾ ಪ್ರಶಿಕ್ಷಣಾರ್ಥಿ ಗೌರವಕ್ಕೆ ಧನ್ಯಾ ಎನ್.ನಾಯಕ, 43ನೇ ತಂಡದಲ್ಲಿ ಸರ್ವೋತ್ತಮ ಪ್ರಶಿಕ್ಷಣಾರ್ಥಿಯಾಗಿ ಪಿ ಎಸ್ ಐ ಎನ್.ಎಸ್.ಸೋಮನಾಥ್ ಹಾಗೂ ಸರ್ವೋತ್ತಮ ಮಹಿಳಾ ಪ್ರಶಿಕ್ಷಣಾರ್ಥಿ ಗೌರವಕ್ಕೆ ಪಿ ಎಸ್ ಐ ಸುಷ್ಮಾ ಪಾತ್ರರಾದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.