ಗುರುವಾರ , ಅಕ್ಟೋಬರ್ 21, 2021
27 °C

ಸಿದ್ದರಾಮಯ್ಯ ಆರ್‌ಎಸ್‌ಎಸ್ ಶಾಖೆಗೆ ಬರಲಿ: ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸಿದ್ದರಾಮಯ್ಯರಿಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೆ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಲೇವಡಿ ಮಾಡಿದರು.

‘ಸಿದ್ದರಾಮಯ್ಯ ಅವರಿಗೆ ತಾಲಿಬಾನ್ ಏನೆಂದು ಗೊತ್ತಿಲ್ಲ, ಬಿಜೆಪಿ, ಆರ್‌ಎಸ್‌ಎಸ್‌ ಏನು ಎಂದು ಗೊತ್ತಿಲ್ಲ. ಯಾವುದಕ್ಕು ಯಾವ ಸಂಬಂಧವು ಇಲ್ಲದೆ ಏನೇನೋ ಮಾತನಾಡುತ್ತಿದ್ದಾರೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿಯಬೇಕಾದರೆ ಯಾವುದಾದರು ಆರ್‌ಎಸ್‌ಎಸ್‌ ಶಾಖೆಗೆ ಬರಲಿ.  ನಾನೆ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗುತ್ತೇನೆ’ ಎಂದು ಹೇಳಿದರು.

ಇದನ್ನೂ ಓದಿ... ನಾವಿಬ್ಬರೂ ಒಂದೇ ಎಂದು ಒಗ್ಗಟ್ಟಿನ ಮಂತ್ರ ಸಾರಿದ ನಿಖಿಲ್‌ –ಪ್ರಜ್ವಲ್‌

ಚಾಮರಾಜನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರುವುದು ಖಚಿತ. ರಾಷ್ಟ್ರಪತಿಗಳನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ನಂತರ ಚಾಮರಾಜನಗರಕ್ಕೆ ಬರಲಿದ್ದಾರೆ ಎಂದರು.

ಉದ್ಘಾಟನೆಗೆ 500 ಹಾಗೂ ಜಂಬೂ ಸವಾರಿಗೆ 1000 ಜನ ಎಂದು ತಜ್ಞರ ಸಮಿತಿ ಹೇಳಿದೆ. ಈ ಸಂಖ್ಯೆಯನ್ನು ಹೆಚ್ಚು ಮಾಡಲು ಕೇಳಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ... ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುತ್ತೇನೆ: ಶ್ರೀಕಂಠೇಗೌಡ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು