ಮಂಗಳವಾರ, ಅಕ್ಟೋಬರ್ 27, 2020
28 °C

ಮೈಸೂರು ನಗರ, ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಉತ್ತಮ ಮಳೆ ಸುರಿಯಿತು.

ನಗರದಲ್ಲಿ ಸಂಜೆ ಆರು ಗಂಟೆ ಸುಮಾರಿಗೆ ಆರಂಭವಾದ ಮಳೆ ಕೆಲವು ಭಾಗಗಳಲ್ಲಿ ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಸುರಿಯಿತು.

ನಗರದಲ್ಲಿ ಇಡೀ ದಿನ ಬಿಸಿಲಿನ ವಾತಾವರಣವಿತ್ತು. ಸಂಜೆ ಏಕಾಏಕಿ ವರುಣ ಅಬ್ಬರಿಸಿದ ಕಾರಣ ಹಲವರು ಮಳೆ ನೀರಿನಲ್ಲಿ ನೆನೆದುಕೊಂಡೇ ಮನೆ ಸೇರಬೇಕಾಯಿತು. ದ್ವಿಚಕ್ರವಾಹನ ಸವಾರರು ಮಳೆಯಿಂದ ರಕ್ಷಣೆ ಪಡೆಯಲು ಹರಸಾಹಸಪಟ್ಟರು. ಕೆಲವು ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು.

ಪಿರಿಯಾಪಟ್ಟಣ, ಹುಣಸೂರು, ನಂಜನಗೂಡು, ಕೆ.ಆರ್‌.ನಗರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಜಯಪುರ ಹೋಬಳಿಯಾದ್ಯಂತ ಧಾರಾಕಾರ ಮಳೆ ಸುರಿದಿದೆ. ವರುಣಾ ಮತ್ತು ಬನ್ನೂರು ಭಾಗದಲ್ಲೂ ಮಳೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು