ಶುಕ್ರವಾರ, ಡಿಸೆಂಬರ್ 6, 2019
25 °C
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

ಕಾವೇರಿ ಗ್ರಾಮೀಣ ಬ್ಯಾಂಕ್‌ ನೌಕರರ ಮುಷ್ಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಮೈಸೂರು: ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ, ಕಾವೇರಿ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಯಿತು.

ವಿಜಯನಗರದ ಪ್ರಧಾನ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಎಂ.ಮುನಿಯಪ್ಪ ಮಾತನಾಡಿ, ಗ್ರಾಮೀಣ ಬ್ಯಾಂಕುಗಳಲ್ಲಿ ದಿನಗೂಲಿ, ಹೊರಗುತ್ತಿಗೆ ಪದ್ಧತಿ ರದ್ದಾಗಬೇಕು. ಸುಪ್ರೀಂ ಕೋರ್ಟ್‌ ಆದೇಶದಂತೆ ವಾಣಿಜ್ಯ ಬ್ಯಾಂಕ್‌ಗಳ ಉದ್ಯೋಗಿಗಳಿಗೆ ನೀಡುವ ನಿವೃತ್ತಿ ವೇತನವನ್ನು ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳಿಗೂ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಬೇಕು ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕೈಬಿಡಬೇಕು. ಗ್ರಾಮೀಣ ಬ್ಯಾಂಕ್ ನೌಕರರಿಗೂ ಕಂಪ್ಯೂಟರ್ ಬಡ್ತಿ ನೀಡಬೇಕು. 10ನೇ ವೇತನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು. ವಾಣಿಜ್ಯ ಬ್ಯಾಂಕುಗಳಲ್ಲಿ ಇರುವಂತೆ ನೇಮಕಾತಿ ಮತ್ತು ಬಡ್ತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಆರ್.ಕೃಷ್ಣಮೂರ್ತಿ, ನೌಕರರ ಸಂಘದ ಅಧ್ಯಕ್ಷ ಟಿ.ಪುಟ್ಟರಾಜು, ಪ್ರಧಾನ ಕಾರ್ಯದರ್ಶಿ ವಿ.ಆರ್.ಶ್ರೀನಿವಾಸ್, ಸುಬ್ರಹ್ಮಣ್ಯ, ನಾಗಭೂಷಣ ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)