ಮೈಸೂರು: ‘ನಮ್ಮದು ಎಲ್ಲರನ್ನೂ ಒಳಗೊಂಡ ಸರ್ಕಾರ’ ಎಂದು ಸಚಿವ ಕೋಟ ಶ್ರೀನಿವಾಸಪೂಜಾರಿ ತಿಳಿಸಿದರು.

ಮುಸ್ಲಿಂ ವ್ಯಾಪಾರಿಗಳ ಬಹಿಷ್ಕಾರ ಕುರಿತು ಇಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಮಾಜದಲ್ಲಿ ನಾನಾ ರೀತಿಯ ಚರ್ಚೆಗಳು ನಡೆಯುತ್ತಿರುತ್ತದೆ. ಆದರೆ, ನಮ್ಮ ಸರ್ಕಾರ ಎಲ್ಲರನ್ನೂ ಒಳಗೊಂಡು, ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುತ್ತಾ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಸರಿಯಾದ ದಿಕ್ಕಿನಲ್ಲಿ ಹೆಜ್ಜೆ ಹಾಕುತ್ತಿದೆ. ಹಾಗೆಂದು, ಪ್ರಚಾರ ಪಡೆಯುವ ಹುಚ್ಚು ಸರ್ಕಾರಕ್ಕಿಲ್ಲ’ ಎಂದು ಹೇಳಿದರು.

ಕಾಂಗ್ರೆಸ್ನವರು ಎಂದಿಗೂ ಬಿಜೆಪಿಯನ್ನು ಹೊಗಳಿದ್ದೇ ಇಲ್ಲ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಕೇವಲ ಟೀಕಿಸುವುದಷ್ಟೇ ಕೆಲಸ. ಹಾಗಾಗಿ, ಅವರ ಹೇಳಿಕೆಗಳಿಗೆ ಹೆಚ್ಚಿನ ಮಹತ್ವ ಕೊಡಬಾರದು ಎಂದರು.

‘ಇಡೀ ಸಮಾಜವೇ ಒಂದು ಕಡೆ ಹೋಗುತ್ತಿದ್ದರೆ ಕಾಂಗ್ರೆಸ್ ಮಾತ್ರ ಬೇರೊಂದು ಕಡೆಗೆ ಹೋಗುತ್ತಿದೆ. ಇದು ಏಕೆಂದು ಅರ್ಥವಾಗುತ್ತಿಲ್ಲ. ನ್ಯಾಯಾಲಯ ಹಿಜಾಬ್ ಕುರಿತು ತೀರ್ಪು ನೀಡಿದ ಬಳಿಕವೂ ಕಾಂಗ್ರೆಸ್ ಅದಕ್ಕೆ ಭಿನ್ನವಾಗಿ ಚಿಂತಿಸುತ್ತಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.