ಸೋಮವಾರ, ಮಾರ್ಚ್ 27, 2023
32 °C

ವಿದ್ಯುತ್ ಖರೀದಿಯಲ್ಲಿ ಕಮಿಷನ್ ದಂಧೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ನಮ್ಮ ರಾಜ್ಯದಲ್ಲೇ ಸಾಕಾಗುವಷ್ಟು ವಿದ್ಯುತ್ ಖರೀದಿ ಮಾಡುವ ಶಕ್ತಿ ಇದ್ದರೂ ಹೆಚ್ಚುವರಿ ಹಣ ನೀಡಿ ಖಾಸಗಿ ಕಂಪನಿಗಳಿಂದ ರಾಜ್ಯಸರ್ಕಾರ ವಿದ್ಯುತ್ ಖರೀದಿ ಮಾಡುತ್ತಿದೆ. ಇದೊಂದು ಕಮಿಷನ್ ದಂಧೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.

ರಾಜ್ಯದಲ್ಲಿರುವ ಎಲ್ಲ ಸ್ಥಾವರಗಳನ್ನೂ ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ 14,574 ಮೆಗಾವ್ಯಾಟ್‌ನಷ್ಟು ವಿದ್ಯುತ್ ಉತ್ಪಾದಿಸಬಹುದು. 9,451 ಮೆಗಾವ್ಯಾಟ್ ಸದ್ಯದ ಬೇಡಿಕೆ‌. ಆದರೆ, ಈಗ ಕೇವಲ 6,708 ಮೆಗಾವ್ಯಾಟ್ ಮಾತ್ರ ಉತ್ಪಾದನೆಯಾಗುತ್ತಿದೆ ಎಂದು ಹೇಳಿದರು.

ಕೊರತೆಯಾಗಿರುವ ವಿದ್ಯುತ್‌ನ್ನು ಅದಾನಿ ಮಾಲೀಕತ್ವ ಹಾಗೂ ಇನ್ನಿತರೆ ಕಂಪನಿಗಳಿಂದ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಪ್ರತಿ ಯೂನಿಟ್‌ಗೆ ₹ 4.70 ದರ ನಿಗದಿ ಮಾಡಿದ್ದರೆ, ಸರ್ಕಾರ ₹ 6 ನೀಡುತ್ತಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.

ಈ ಕುರಿತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕರ್ನಾಟಕ ಪವರ್‌ ಕಾರ್ಪೋರೇಷನ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್ ಪತ್ರ ಬರೆದಿದ್ದಾರೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು