ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್‌: ಹೊರಹರಿವು ಮತ್ತೆ ಹೆಚ್ಚಳ

Last Updated 29 ಜುಲೈ 2019, 14:49 IST
ಅಕ್ಷರ ಗಾತ್ರ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೊರಹರಿಸುವ ನೀರಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ.

ಕಳೆದೊಂದು ವಾರದಿಂದ ಸಮಪ್ರಮಾಣದಲ್ಲಿ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಆದರೆ ಸೋಮವಾರ ನದಿಗೆ ಹರಿಸುತ್ತಿರುವ ನೀರು ದ್ವಿಗುಣಗೊಂಡಿದ್ದು, ತಮಿಳುನಾಡಿಗೆ ಹರಿದು ಹೋಗುತ್ತಿದೆ. ಜುಲೈ 19ರಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದ್ದು ಈಗಾಗಲೇ 2 ಟಿಎಂಸಿ ಅಡಿ ನೀರು ಹರಿದು ಹೋಗಿದೆ.

‘ಹೇಮಾವತಿ ಜಲಾಶಯದಿಂದಲೂ ನೀರು ಬಿಡುಗಡೆ ಮಾಡಲಾಗಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ಹೇಮಾವತಿ ಪಾಲನ್ನೂ ನದಿಗೆ ಹರಿಸಬೇಕಾಗಿದೆ. ಹೀಗಾಗಿ ಹೊರಹರಿವು ಹೆಚ್ಚಿಸಲಾಗಿದೆ’ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್‌ ರಾಮಕೃಷ್ಣ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT