ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ–ಸೆಟ್‌: ಪತ್ರ ಬರೆದ ಕುಲಪತಿ

Last Updated 25 ಆಗಸ್ಟ್ 2020, 8:07 IST
ಅಕ್ಷರ ಗಾತ್ರ

ಮೈಸೂರು: ಕೋವಿಡ್‌–19 ಹರಡುವಿಕೆ ತಡೆಗಟ್ಟಲಿಕ್ಕಾಗಿ ಎರಡ್ಮೂರು ಬಾರಿ ಮುಂದೂಡಲ್ಪಟ್ಟಿರುವ ಕರ್ನಾಟಕ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಯ ದಿನಾಂಕ ನಿಗದಿ ಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಮಂಗಳವಾರ ಇಲ್ಲಿ ತಿಳಿಸಿದರು.

‘ರಾಜ್ಯ ಸರ್ಕಾರ ಈಗಾಗಲೇ ರಾಜ್ಯದಲ್ಲಿನ ಎಲ್ಲ ವಿ.ವಿ.ಗಳ ಜೊತೆ ಸಂವಹನ ನಡೆಸಿದೆ. ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಿ ಆದೇಶ ಹೊರಡಿಸಲಿದೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ವಿ.ವಿ.ಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆ ಪೂರ್ಣಗೊಂಡಿದೆ. ಸರ್ಕಾರ ಅನುಮತಿ ನೀಡಬೇಕಷ್ಟೇ. ಕೋವಿಡ್‌ನ ಈ ಸಂಕಷ್ಟದ ಕಾಲದಲ್ಲಿ ವಿಳಂಬವಾಗಬಹುದು’ ಎಂದು ಹೇಮಂತ್‌ಕುಮಾರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT