ಭಾನುವಾರ, ಮೇ 9, 2021
19 °C
ಗ್ರಾಮಾಂತರ ಘಟಕದಲ್ಲಿ ಶೇ 60, ನಗರ ಘಟಕದಲ್ಲಿ ಶೇ 80 ಸಿಬ್ಬಂದಿ ಕರ್ತವ್ಯಕ್ಕೆ

ಮೈಸೂರು: ಜಿಲ್ಲೆಯಲ್ಲಿ ಸಾರಿಗೆ ಬಸ್‌ಗಳ ಸಂಚಾರ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಹೆಚ್ಚಾಗುತ್ತಿದ್ದು, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿರುವ ಸಿಬ್ಬಂದಿಯ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ.

ಗ್ರಾಮಾಂತರ ಘಟಕದಲ್ಲಿ ಶನಿವಾರ ಶೇ 60ಕ್ಕೂ ಹೆಚ್ಚಿನ ಸಿಬ್ಬಂದಿ ಅಂದರೆ 1,200 ಮಂದಿ ಕರ್ತವ್ಯಕ್ಕೆ ಹಾಜರಾದರು. ನಗರ ಘಟಕದಲ್ಲಿ ಶೇ 80ಕ್ಕೂ ಅಧಿಕ ಎಂದರೆ, 1,200 ಮಂದಿ ಕೆಲಸಕ್ಕೆ ಹಾಜರಾದರು ಎಂದು ಎರಡೂ ವಿಭಾಗಗಳ ಸಂಚಾರ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

‘ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಹೆಚ್ಚುತ್ತಿದೆ. ಶನಿವಾರ ಒಂದೇ ದಿನ 1,200ಕ್ಕೂ ಅಧಿಕ ಸಿಬ್ಬಂದಿ ಕೆಲಸಕ್ಕೆ ಬಂದಿದ್ದಾರೆ’ ಎಂದು ಗ್ರಾಮಾಂತರ ಘಟಕದ ವಿಭಾಗೀಯ ನಿಯಂತ್ರಣಾ ಧಿಕಾರಿ ಶ್ರೀನಿವಾಸ್ ಹೇಳಿದರು.

‘ನಗರ ಘಟಕದಲ್ಲಿ 316 ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಿದವು’ ಎಂದು ನಗರ ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್‌.ಪಿ.ನಾಗರಾಜ್‌ ತಿಳಿಸಿದರು.

ಗ್ರಾಮಾಂತರ ಘಟಕದಿಂದ ಹೊರಬಿದ್ದ 580 ಬಸ್‌ಗಳ ಪೈಕಿ 350 ಕೆಎಸ್‌ಆರ್‌ಟಿಸಿ ಬಸ್‌ಗಳೇ ಇದ್ದವು. ಉಳಿದ 230 ಬಸ್‌ಗಳು ಖಾಸಗಿ ಸಂಸ್ಥೆಯವರಿಗೆ ಸೇರಿದ್ದವರು.

ಕೋವಿಡ್ ಪರೀಕ್ಷೆ: ಒಂದು ವಾರದಿಂದ ಕರ್ತವ್ಯಕ್ಕೆ ಗೈರಾಗಿ ಹೊಸದಾಗಿ ಕರ್ತವ್ಯಕ್ಕೆ ಬರುವ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳ ಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮೂಲಗಳು ತಿಳಿಸಿವೆ.

ಒಂದು ಕಡೆ ಕಲ್ಲೆಸೆತ: ಈ ಮಧ್ಯೆ ಗ್ರಾಮಾಂತರ ಘಟಕದಿಂದ ಹೊರಟಿದ್ದ ಒಂದು ಕೆಎಸ್‌ಆರ್‌ಟಿಸಿ ಬಸ್‌ಗೆ ದುಷ್ಕರ್ಮಿಗಳು ಶುಕ್ರವಾರ ತಡರಾತ್ರಿ ಕಲ್ಲೆಸೆದಿದ್ದಾರೆ. ಇದರಿಂದ ಬಸ್‌ನ ಗಾಜುಗಳು ಪುಡಿಪುಡಿಯಾಗಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು