ಮೈಸೂರು: ಇಲ್ಲಿನ ಕುವೆಂಪುನಗರದ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ಅಜಯ್ (25) ಭಾನುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದೊಂದು ವರ್ಷದಿಂದ ಇವರು ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ‘ವರ್ಕ್ ಫ್ರಂ ಹೋಂ’ ಪಡೆದು ಮನೆಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದರು.

ರಾಯಲ್ ಎನ್‌ಫೀಲ್ಡ್ ಬೈಕ್ ಖರೀದಿಸಬೇಕು ಎಂದು ಇವರು ತಮ್ಮ ತಾಯಿ, ತಂದೆ ಜತೆ ಪ್ರಸ್ತಾಪಿಸಿದ್ದಾರೆ. ಆದರೆ, ಪೋಷಕರು ಸದ್ಯಕ್ಕೆ ಬೇಡ, ಸ್ವಲ್ಪ ದಿನ ಹೋಗಲಿ ಎಂದು ಹೇಳಿದ್ದಾರೆ. ಇದರಿಂದ ಬೇಸರಗೊಂಡ ಅಜಯ್ ರಾತ್ರಿ ಊಟ ಮುಗಿಸಿ ತಾಯಿ, ತಂದೆ ಹೊರಗೆ ವಾಕಿಂಗ್ ಹೋಗಿದ್ದಾಗ ಮನೆಯಲ್ಲಿ ಬಾಗಿಲು ಹಾಕಿಕೊಂಡು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕುವೆಂಪುನಗರ ಠಾಣೆಯಲ್ಲಿ ದಾಖಲಾಗಿದೆ.

ಮದ್ಯ ಅಕ್ರಮ ಮಾರಾಟ

ಮೈಸೂರು: ಇಲ್ಲಿನ ಮಂಡಿಮೊಹಲ್ಲಾದ ರಾಜರಾಜೇಶ್ವರಿನಗರದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಬ್ಬಮ್ಮ ಹಾಗೂ ಶಿವಣ್ಣ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.

ಇವರಿಂದ 136 ಪೌಚ್ ಮದ್ಯದ ಪೌಚ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.