ಗುರುವಾರ , ಜನವರಿ 21, 2021
29 °C

ಮೈಸೂರಿನ ಹಲವೆಡೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹಲವೆಡೆ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದರು.

ಪುರಭವನದ ಆವರಣದಲ್ಲಿ ಬಹಿರಂಗ ಸಭೆ ನಡೆಯಿತು. ಕೆ ಎಸ್ ಆರ್ ಟಿ ಸಿ ನೌಕರರು ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ, ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಬ್ಯಾಂಕ್ ನೌಕರರು ನಜರ್ ಬಾದಿನ ಕೆನರಾ ಬ್ಯಾಂಕ್ ಮುಂಭಾಗ ಧರಣಿ ನಡೆಸಿದರು.

ಅಗ್ರಹಾರ, ಹೆಬ್ಬಾಳ, ವಿಜಯನಗರ, ಒಂಟಿಕೊಪ್ಪಲು, ರೈಲ್ವೆ ನಿಲ್ದಾಣದ ಸಮೀಪ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು