ಶುಕ್ರವಾರ, ಜೂನ್ 25, 2021
29 °C

ಐಎಎಸ್‌ ಅಧಿಕಾರಿಗಳ ಕಚ್ಚಾಟ | ಸಮನ್ವಯತೆಯ ಕೊರತೆ ಕಾರಣ -ಬಡಗಲಪುರ ನಾಗೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಸರ್ಕಾರದ ಮಟ್ಟದಲ್ಲಿ ಸಮನ್ವಯತೆ ಕೊರತೆ ಇರುವುದಿಂದಲೇ ಐಎಎಸ್‌ ಅಧಿಕಾರಿಗಳು ಕಚ್ಚಾಟಕ್ಕೆ ಇಳಿದಿದ್ದಾರೆ. ಹಿರಿಯ ಅಧಿಕಾರಿಗಳು ಅಖಾಡದಲ್ಲಿ ಕುಸ್ತಿ ಆಡುತ್ತಿರುವುದು ಮೈಸೂರಿಗೆ ಅಗೌರವ ತಂದಿರುವ ಬೆಳವಣಿಗೆ’ ಎಂದು ಕರ್ನಾಟಕ ರಾಜ್ಯ ರೈತರ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅಸಮಾಧಾನ ಹೊರಹಾಕಿದರು.

ಅಧಿಕಾರಿಗಳು ಏನೇ ಸಮಸ್ಯೆ ಇದ್ದರೂ ಸರ್ಕಾರದ ಮುಂದೆ ಹೇಳಿಕೊಳ್ಳಬೇಕಾಗಿತ್ತು. ಅದರದ್ದೇ ಆದ ನೀತಿ ನಿಯಮಗಳು ಇವೆ. ಅವೆಲ್ಲವನ್ನೂ ಮಿತಿ ಮೀರಿರುವುದಿಂದ ಈ ರೀತಿಯ ಬೆಳವಣಿಗೆಗಳು ನಡೆಯುತ್ತಿವೆ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ದೂರಿದರು.

ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಇದಕ್ಕೆ ಮೊದಲ ಕಾರಣ. ಕೋವಿಡ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಅವರ ನಡುವೆಯೇ ಸಮನ್ವಯತೆ ಕೊರತೆ ಇದೆ. ಆದ್ದರಿಂದ ಇಲ್ಲಿ ಅಧಿಕಾರಿಗಳು ಲಂಗು ಲಗಾಮಿಲ್ಲದೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು