ಚಾಮುಂಡಿ ಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶಾಶ್ವತ ಕಾಮಗಾರಿ: ಸಚಿವ ಎಸ್.ಟಿ.ಎಸ್
ಮೈಸೂರು: ಚಾಮುಂಡಿ ಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು.
ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಉಂಟಾಗಿರುವ ಜಾಗವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೋಮವಾರ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.
ಈ ಸಂಬಂಧ ನಾಳೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು. ಜಿಲ್ಲೆಯ ಎಲ್ಲ 11 ಶಾಸಕರಿಗೂ ಮುಖ್ಯಮಂತ್ರಿ ಜತೆ ಮಾತನಾಡಲು ಆಹ್ವಾನ ನೀಡಿದ್ದೇನೆ ಎಂದರು.
ದೀಪಾವಳಿ ನಂತರ ಸಚಿವ ಸಿ ಸಿ ಪಾಟೀಲ ಸಹ ಚಾಮುಂಡಿ ಬೆಟ್ಟಕ್ಕೆ ಬಂದು, ಭೂ ಕುಸಿತವಾಗಿರುವ ಸ್ಥಳವನ್ನು ಪರಿಶೀಲಿಸಲಿದ್ದಾರೆ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.