ಶನಿವಾರ, ಸೆಪ್ಟೆಂಬರ್ 21, 2019
21 °C

ಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ಸೆರೆ; ಇಬ್ಬರಿಗೆ ಗಾಯ

Published:
Updated:

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ಮಧ್ಯಾಹ್ನ ಸೆರೆ ಹಿಡಿದಿದ್ದಾರೆ.

ಉರುಳಿಗೆ ಸಿಲುಕಿ ಗಾಯಗೊಂಡಿದ್ದ ಚಿರತೆಯು ಗ್ರಾಮದ ಬಸವಶೆಟ್ಟಿ ಎಂಬುವವರಿಗೆ ಸೇರಿದ ಮನೆಗೆ ನುಗ್ಗಿತು. ಈ ಮನೆಯಲ್ಲಿ ಯಾರೂ ವಾಸವಿರಲಿಲ್ಲ. ಇದನ್ನು ನೋಡಲು ಬಂದ ಆನಂದಮೂರ್ತಿ ಮತ್ತು ರಾಚಶೆಟ್ಟಿ ಅವರಿಗೆ ಚಿರತೆ ಪರಚಿ ಗಾಯಗೊಳಿಸಿತು.

ನಂತರ, ಮನೆಯ ಬಾಗಿಲು ಹಾಕಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿದರು. ಇದರ ಕುತ್ತಿಗೆಯಲ್ಲಿ ಬಿಗಿದಿದ್ದ ಉರುಳನ್ನು ತೆಗೆದರು. ಒಂದೆರಡು ಗಂಟೆ ಕಳೆದಿದ್ದರೆ ಚಿರತೆಯು ಮೃತಪಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Post Comments (+)