ಬುಧವಾರ, ಜನವರಿ 19, 2022
28 °C

ಮೈಸೂರಿನಲ್ಲಿ ಕೋಳಿಫಾರಂ ಹೊಕ್ಕಿದ್ದ ಚಿರತೆ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಸಮೀಪ ಕೋಳಿ ಫಾರಂವೊಂದಕ್ಕೆ ಮಂಗಳವಾರ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಕೋಳಿ ಫಾರಂ ಒಳಗೆ ನುಸುಳಿದ್ದ ಚಿರತೆಯನ್ನು ಬೆಳಿಗ್ಗೆ 6 ಗಂಟೆ ಸುಮಾರಿನಲ್ಲಿ ಕಂಡ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದರು.

ಆರ್‌ಎಫ್ಒ ಗಿರೀಶ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.‌ ಪಶುವೈದ್ಯ ವಸೀಂ ಅವರು ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿದರು.

'ಮೂರರಿಂದ ಮೂರೂವರೆ ವರ್ಷ ವಯಸ್ಸಿನ ಹೆಣ್ಣು ಚಿರತೆ ಇದಾಗಿದ್ದು, ಸದ್ಯ ಚಿರತೆ ಆರೋಗ್ಯವಾಗಿದೆ‌. ಕೆಲವೇ ಗಂಟೆಗಳಲ್ಲಿ ಇದನ್ನು ಕಾಡಿನೊಳಗೆ ಬಿಡಲಾಗುವುದು' ಎಂದು ಡಿಸಿಎಫ್ ಕಮಲಾ ಕರಿಕಾಳನ್ ಪ್ರಜಾವಾಣಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು