ಬುಧವಾರ, ಏಪ್ರಿಲ್ 21, 2021
32 °C

ಸರಗೂರಿನ ಸಮೀಪ ಬೋನಿಗೆ ಬಿದ್ದ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸರಗೂರು: ಇಲ್ಲಿಗೆ ಸಮೀಪದ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ 1 ವರ್ಷದ ಹೆಣ್ಣು ಚಿರತೆಯು ಬುಧವಾರ ಬೋನಿಗೆ ಬಿದ್ದಿದೆ.

ಮಂಗಳವಾರ ಚಿರತೆಯು ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿ ಸಮೀಪದ ರಾಗಿ ಮೆದೆಯ ಕೆಳಗೆ ನುಸಳಿತ್ತು. ಇದರ ಚಲನವಲನಗಳನ್ನು ಗ್ರಾಮಸ್ಥರು ವಿಡಿಯೊ ಮಾಡಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಕೂಡಲೇ ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ಶಾಲಿನಿ ಅವರು ಬೋನನ್ನು ಇರಿಸಿದರು. ಬುಧವಾರ ಚಿರತೆಯು ಬೋನಿಗೆ ಬಿದ್ದಿದೆ. ನಂತರ, ಇದನ್ನು ಬಂಡೀಪುರ ಅರಣ್ಯಕ್ಕೆ ಬಿಡಲಾಯಿತು ಎಂದು ಮೂಲಗಳು ತಿಳಿಸಿವೆ. ಅರಣ್ಯ ಇಲಾಖೆಯ ಪಾರ್ವತಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.