ಶುಕ್ರವಾರ, ಏಪ್ರಿಲ್ 3, 2020
19 °C

ಕಬ್ಬು ಕಟಾವಿನ ವೇಳೆ ಮೂರು ಚಿರತೆ ಮರಿ ಪತ್ತೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿ.ನರಸೀಪುರ: ತಾಲ್ಲೂಕಿನ ತುಂಬಲ ಗ್ರಾಮದ ಜಮೀನೊಂದರಲ್ಲಿ ಮಂಗಳವಾರ ಕಬ್ಬು ಕಟಾವಿನ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.

ಗ್ರಾಮದ ಇರ್ಷಾದ್ ಎಂಬುವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಈ ಮೂರು ಮರಿಗಳು ಸಿಕ್ಕಿದ್ದು, ಮೂರ್ನಾಲ್ಕು ದಿನದ ಹಿಂದಷ್ಟೇ ಜನಿಸಿರಬಹುದು ಎನ್ನಲಾಗಿದೆ.

ಅರಣ್ಯ ಇಲಾಖೆಗೆ ಮಾಹಿತಿ ದೊರೆತ ತಕ್ಷಣವೇ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)