ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್.ನಗರ: ಚಿರತೆ ಮರಿ ರಕ್ಷಣೆ

Last Updated 31 ಜನವರಿ 2020, 10:16 IST
ಅಕ್ಷರ ಗಾತ್ರ

ಕೆ.ಆರ್.ನಗರ: ತಾಲ್ಲೂಕಿನ ಮಿರ್ಲೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸಿಕ್ಕಿದ 2 ತಿಂಗಳ ಗಂಡು ಚಿರತೆ ಮರಿಯನ್ನು ರಕ್ಷಣೆ ಮಾಡಲಾಗಿದೆ.

ಗ್ರಾಮದ ರೈತರೊಬ್ಬರು ಗುರುವಾರ ಕಬ್ಬಿನ ಗದ್ದೆಗೆ ಹೋದಾಗ ಚಿರತೆ ಮರಿ ಕಾಣಿಸಿದೆ. ರೈತ ಆ ಮರಿಯನ್ನು ರಕ್ಷಣೆ ಮಾಡಿದ್ದರು. ಈ ವಿಷಯ ತಿಳಿದ ಪಿಡಿಒ ಸಂತೋಷ್‌ ಅವರು ಮರಿಯನ್ನು ವಶಕ್ಕೆ ಪಡೆದು, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮರಿಯನ್ನು ವಶಕ್ಕೆ ಪಡೆದರು.

ಚಿರತೆ ಮರಿಗೆ ಪಶು ವೈದ್ಯಾಧಿಕಾರಿಗಳು ಆರೋಗ್ಯ ತಪಾಸಣೆ ಮಾಡಿದರು. ಬಳಿಕ, ಮೈಸೂರಿನ ಇಲವಾಲದ ಬಳಿ ಇರುವ ಪ್ರಾಣಿಗಳ ಆರೈಕೆ ಘಟಕಕ್ಕೆ ಕಳುಹಿಸಿಕೊಡಲಾಗಿದೆ ಎಂದು ಉಪ ವಲಯ ಅರಣ್ಯಾಧಿಕಾರಿ ಬಿ.ಎನ್.ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT