ಶುಕ್ರವಾರ, ಡಿಸೆಂಬರ್ 3, 2021
26 °C

ಸಿದ್ದರಾಮಯ್ಯ ಬಿಡದಿ ತೋಟಕ್ಕೆ ಬರಲಿ: ಎಚ್.ಡಿ.ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುರಿಸಾಕಣೆ ಹಾಗೂ ಕೃಷಿಯನ್ನು ನನ್ನ ಬಿಡದಿ ತೋಟಕ್ಕೆ ಬಂದು ನೋಡಲಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸವಾಲೆಸೆದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರಿ ಸಾಕಿದ್ದಾರಾ ಎಂದು ಕೇಳಿರುವ  ಸಿದ್ದರಾಮಯ್ಯ ತಾವೊಬ್ಬರೇ ಕುರಿ ಸಾಕಿರೋದು ಎಂದುಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಸಿದ್ದರಾಮಯ್ಯ ಸಿಂಧಗಿಯಲ್ಲಿ ಜಾತಿಗೊಂದು ಸಮಾವೇಶ ಮಾಡುತ್ತಿದ್ದಾರೆ. ಇದೇನಾ ಅವರ ಜಾತ್ಯಾತೀತತೆ? ರಾಜ್ಯದಲ್ಲಿ ಜಾತಿಗಳ ನಡುವೆ ಅವರು ಕಂದಕ ಸೃಷ್ಟಿಸುತ್ತಿದ್ದಾರೆ’ ಎಂದು ದೂರಿದರು.

‘ಜೆಡಿಎಸ್ ವೇಗ ನೋಡಿ ಅವರಿಗೆ ತಳಮಳ ಉಂಟಾಗಿರುವುದರಿಂದಲೇ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿದ್ದಾರೆ. ಅವರೆಷ್ಟೇ ಟೀಕಿಸಿದರೂ ನಾವು ಗಟ್ಟಿಯಾಗುತ್ತೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು