ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ನಿಂದ ಸಂಕಷ್ಟ; ನಿರ್ದೇಶಕ ಆತ್ಮಹತ್ಯೆ

Last Updated 7 ಜುಲೈ 2021, 9:40 IST
ಅಕ್ಷರ ಗಾತ್ರ

ಮೈಸೂರು: ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಕಿರುನಾಟಕ ನಿರ್ದೇಶಕ ನವೀನ್‌ಕುಮಾರ್ (32) ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ತಮ್ಮದೇಯಾದ ಒಂದು ತಂಡವನ್ನು ಕಟ್ಟಿಕೊಂಡು ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾಕಷ್ಟು ಕಿರು ನಾಟಕಗಳನ್ನು ಪ್ರದರ್ಶಿಸಿದ್ದರು. ಲಾಕ್‌ಡೌನ್‌ನಿಂದ ಒದಗಿದ ಆರ್ಥಿಕ ಸಂಕಷ್ಟದಿಂದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

37 ವರ್ಷಗಳ ನಂತರ ಆರೋಪಿ ಬಂಧನ

37 ವರ್ಷಗಳ ಹಿಂದೆ ಕಳ್ಳತನ ಪ್ರಕರಣವೊಂದರಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕೆ.ಆರ್.ನಗರ ತಾಲ್ಲೂಕಿನ ಐಚನಹಳ್ಳಿ ಗ್ರಾಮದ ನಾಗರಾಜ ಎಂಬಾತನನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ನಾಗರಾಜ 1983ರಲ್ಲಿ ತಾಲ್ಲೂಕಿನ ಕಿರನಲ್ಲಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ನಂತರ, ಜಾಮೀನು ಪಡೆದು ನ್ಯಾಯಾಲಯಕ್ಕೆ ಸತತ 37 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ಸದಾಶಿವ ತಿಪರೆಡ್ಡಿ, ಸಿಬ್ಬಂದಿ ಗವಿ ಗೌಡ, ನಂಜುಂಡಸ್ವಾಮಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT