ಮಂಗಳವಾರ, ಫೆಬ್ರವರಿ 25, 2020
19 °C

ಪ್ರೇಮಿಗಳ ದಿನಾಚರಣೆಗೆ ಮುನ್ನವೇ ಆತ್ಮಹತ್ಯೆಗೆ ಶರಣಾದ ಯುವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಪ್ರಿಯಕರನ ಕಿರುಕುಳಕ್ಕೆ ಬೇಸತ್ತ ಪ್ರಿಯತಮೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೇಘನಾ(೨೦) ಮೃತ ದುರ್ದೈವಿ, ಪ್ರಿಯತಮ ಮಣಿಕಂಠ ಕೆಲವು ದಿನಗಳಿಂದ ಪ್ರೀತಿಸುತ್ತಿದ್ದರು.  ಇಬ್ಬರದ್ದೂ ಬೇರೆಬೇರೆ ಜಾತಿ ಹಿನ್ನೆಲೆಯುಳ್ಳವರು ಎನ್ನಲಾಗಿದೆ. ಇಬ್ಬರೂ ಮದುವೆಯಾಗುವುದಾಗಿ ಹೇಳಿದಾಗ ಕುಟುಂಬದವರು ಒಪ್ಪದೆ, ಮದುವೆಗೆ ವಿರೋಧ ವ್ಯಕ್ತವಾಗಿತ್ತು ಎಂದು ಗೊತ್ತಾಗಿದೆ.

ಇಬ್ಬರಿಗೂ ಬುದ್ಧಿವಾದ ಹೇಳಿದ್ದ ಮೇಘನಾ ಪೋಷಕರು ಬೇರೆ ಬೇರೆ ಮಾಡಿದ್ದರು ಎನ್ನಲಾಗಿದೆ. ಮೇಘನಾ ಒಪ್ಪಿಗೆ ಪಡೆದು ಮತ್ತೊಬ್ಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿದ್ದರು. 

ಈ ವಿಚಾರ ತಿಳಿದು ನಿಶ್ಚಿತಾರ್ಥ ಮಾಡಿಕೊಂಡ ಹುಡುಗನಿಗೆ ಪ್ರೀತಿ ವಿಚಾರ ತಿಳಿಸಿದ್ದ ಮಣಿಕಂಠ ತನ್ನ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ಮೇಘನಾಗೆ ಒತ್ತಾಯಿಸಿದ ಮಣಿಕಂಠ ಇಬ್ಬರೂ ಒಟ್ಟಿಗೆ ಇರುವ ಫೋಟೋ ವಾಟ್ಸಾಪ್‌‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆಯನ್ನೂ ಒಡ್ಡಿದ್ದ. ಇವೆಲ್ಲಾ ಬೆಳವಣಿಗೆಯಿಂದ ನೊಂದ ಮೇಘನಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಣಿಕಂಠನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೇಘನಾ ತಂದೆ ಮಹದೇವಯ್ಯ  ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ದೊಡ್ಡಕವಲಂದೆ ಠಾಣೆ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು