ಮೈಸೂರು: ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಸ್.ಡಿ.ಮಹೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.

ವೈಯಕ್ತಿಕ ಕಾರಣದಿಂದ ರಾಜೀನಾಮೆ ಸಲ್ಲಿಸುತ್ತಿರುವೆ ಎಂದು ರಾಜ್ಯ ಘಟಕದ ಅಧ್ಯಕ್ಷರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಮಹೇಂದ್ರ ತಿಳಿಸಿದ್ದಾರೆ.

ಮೈಸೂರು ವಿಭಾಗದ ಸಹ ಉಸ್ತುವಾರಿ, ಹಾಸನ ಶಾಸಕ ಜೆ.ಪ್ರೀತಂಗೌಡ ಮೂಲಕ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದು ತಿಳಿದು ಬಂದಿದೆ.

‘25 ವರ್ಷದಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿರುವೆ. ನನ್ನಿಂದ ಪಕ್ಷ ಮುಜುಗರಕ್ಕೆ ಸಿಲುಕಬಾರದು ಎಂಬ ಕಾರಣಕ್ಕೆ ರಾಜೀನಾಮೆ ಸಲ್ಲಿಸಿರುವೆ. ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿರುವೆ. ಮೈಸೂರು ಎಪಿಎಂಸಿ ಚುನಾವಣೆಯಲ್ಲಿ ವಿನಾಃ ಕಾರಣ ನನ್ನ ವಿರುದ್ಧ ಸುಳ್ಳು ಆರೋಪ ಕೇಳಿ ಬಂತು. ಇದು ಮನಸ್ಸಿಗೆ ಘಾಸಿಯನ್ನುಂಟು ಮಾಡಿದೆ’ ಎಂದು ಎಸ್.ಡಿ.ಮಹೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.