ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲಿಕಾರ್ಜುನಗೌಡ ಅಮಾನತಿಗೆ ಆಗ್ರಹ: ಪತ್ರ ಚಳವಳಿ

Last Updated 4 ಫೆಬ್ರುವರಿ 2022, 8:08 IST
ಅಕ್ಷರ ಗಾತ್ರ

ಮೈಸೂರು: ‘ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿ, ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಅವರನ್ನು ಅಮಾನತು ಮಾಡಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ದೀಪಬುದ್ಧೆ ಆಗ್ರಹಿಸಿದರು.

‘ಗಣರಾಜ್ಯೋತ್ಸವದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ. ನ್ಯಾಯ ನೀಡುವ ನ್ಯಾಯಾಧೀಶರೇ ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದು ಎಷ್ಟು ಸರಿ? ಇವರ ವಿರುದ್ಧ ರಾಜ್ಯ ಸರ್ಕಾರವೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಮಲ್ಲಿಕಾರ್ಜುನ ಗೌಡ ಅಮಾನತಿಗೆ ಆಗ್ರಹಿಸಿ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಜ.27ರಿಂದ ಅಂಚೆ ಚಳವಳಿ ನಡೆಸಿದ್ದು, 1,500 ವಿದ್ಯಾರ್ಥಿಗಳು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ’ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಾದ ಎಸ್.ಎಂ.ನವೀನ, ಪ್ರಮೀಳಾ, ಶಶಿಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT