ಶುಕ್ರವಾರ, ಅಕ್ಟೋಬರ್ 30, 2020
26 °C

ಮೈಸೂರಿನಲ್ಲಿ ಭಾರಿ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ನಗರದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಅರವಿಂದನಗರದ ಬಸ್‌ ಡಿಪೋ ಹಿಂಭಾಗದ ಕಾಂಪೌಂಡ್‌ ಕುಸಿದು, ನಂಜುಂಡಸ್ವಾಮಿ (58) ಎಂಬವರು ಮೃತಪಟ್ಟಿದ್ದಾರೆ.

ನಗರದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಗೋಡೆ ಶಿಥಿಲಗೊಂಡು ಕುಸಿದುಬಿದ್ದಿದೆ. ಸಮೀಪ ನಿಲ್ಲಿಸಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ.

ಧಾರಾಕಾರ ಮಳೆ: ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ.

ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ ಒಂದೂವರೆ ತಾಸು ಜೋರಾಗಿ ಸುರಿಯಿತು. ಆ ಬಳಿಕ ಜಿಟಿಜಿಟಿ ಮಳೆ ಮುಂದುವರಿಯಿತು.

ಜಿಲ್ಲೆಯ ಪಿರಿಯಾಪಟ್ಟಣ, ತಿ.ನರಸೀಪುರ, ಹುಣಸೂರು, ಸಾಲಿಗ್ರಾಮ, ಬೆಟ್ಟದಪುರ, ಜಯಪುರ ಹೋಬಳಿಯಾದ್ಯಂತ ಉತ್ತಮ ಮಳೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು