ಮಂಗಳವಾರ, ಅಕ್ಟೋಬರ್ 20, 2020
21 °C

ಗಾಂಜಾ ವಶ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸೂರು: ತಾಲ್ಲೂಕಿನ ಸಂತೆಕೆರೆ ಕೋಡಿ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಮುಬಾರಕ್ ಎಂಬಾತನನ್ನು ಬಂಧಿಸಿದ್ದು, ಆತನಿಂದ 410 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಗಾಂಜಾ ಮಾರಲು ತೆಗೆದುಕೊಂಡು ಹೋಗುತ್ತಿರುವ ಬಗ್ಗೆ ಮಾಹಿತಿ ತಿಳಿದು ಪೊಲೀಸರು ದಾಳಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಉಪ ಆಯುಕ್ತರಾದ ಮಹಾದೇವಿ ಬಾಯಿ ಅಧಿಕಾರಿಗಳ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಾಚರಣೆಯಲ್ಲಿ ಅಬಕಾರಿ ಡಿವೈಎಸ್ಪಿ ಶ್ರೀನಿವಾಸ್‌, ನಿರೀಕ್ಷಣಾಧಿಕಾರಿ ಧರ್ಮರಾಜ್, ನಟರಾಜ್‌, ಮಂಜುನಾಥ್‌, ಅಜಯ್ ಕುಮಾರ್ ಮತ್ತು ಬಾಲಚಂದ್ರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.