ಬುಧವಾರ, ಆಗಸ್ಟ್ 12, 2020
27 °C

ಮಸಾಜ್‌ ‍‍ಪಾರ್ಲರ್‌ ನೆವದಲ್ಲಿ ವೇಶ್ಯಾವಾಟಿಕೆ; ಮೂವರು ಮಹಿಳೆಯರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಬೋಗಾದಿ ಮುಖ್ಯ ರಸ್ತೆಯಲ್ಲಿದ್ದ ಮಸಾಜ್‌ ಪಾರ್ಲರ್‌ವೊಂದರ ಮೇಲೆ ದಾಳಿ ನಡೆಸಿದ ಸರಸ್ವತಿಪುರಂ ಠಾಣೆ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಚಂದ್ರಶೇಖರ್ (56) ಎಂಬಾತನನ್ನು ಬಂಧಿಸಿದ್ದಾರೆ. ಗ್ರಾಹಕನಾಗಿ ಬಂದಿದ್ದ ಕೀರ್ತಿ (25) ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ವೇಳೆ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಕೆಳಮಹಡಿಯಲ್ಲಿ ಮಸಾಜ್‌ ಪಾರ್ಲರ್‌ ನಡೆಸುತ್ತಿದ್ದ ಈತ ಒಂದನೇ ಮಹಡಿಯಲ್ಲಿದ್ದ ಎರಡು ಕೋಣೆಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ‍ಪೊಲೀಸರು ದಾಳಿ ನಡೆಸಿದರು ಎಂದು ಡಿಸಿಪಿ ಪ್ರಕಾಶ್‌ಗೌಡ ತಿಳಿಸಿದರು.

ಸರಸ್ವತಿಪುರಂ ಠಾಣೆ ಇನ್‌ಸ್ಪೆಕ್ಟರ್ ವಿಜಯಕುಮಾರ್, ಸಬ್‌ಇನ್‌ಸ್ಪೆಕ್ಟರ್ ಭವ್ಯಾ, ಕಾನ್‌ಸ್ಟೆಬಲ್ ರಕ್ಷಿತಾ ಸೇರಿದಂತೆ ಹಲವು ಸಿಬ್ಬಂದಿ ಕಾರ್ಯಾಚರಣೆ ತಂಡದಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.