ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವ, ಸಮಾನತೆಗೆ ಅಪಾಯ: ರಾಜಮೋಹನ ಗಾಂಧಿ ಆತಂಕ

Last Updated 21 ಡಿಸೆಂಬರ್ 2019, 10:04 IST
ಅಕ್ಷರ ಗಾತ್ರ

ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ, ಸಮಾನತೆ, ಭ್ರಾತೃತ್ವಕ್ಕೆ ಅಪಾಯ ಒದಗಿದೆ ಎಂದು ಗಾಂಧೀಜಿ ಅವರ ಮೊಮ್ಮಗ ರಾಜಮೋಹನ ಗಾಂಧಿ ಆತಂಕ ವ್ಯಕ್ತಪಡಿಸಿದರು.

ಗಾಂಧಿ ವಿಚಾರ ಪರಿಷತ್ತು ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ 'ಮಾಧ್ಯಮ: ಪ್ರಜಾಸತ್ತೆ' ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತವು ಹಿಂದೂಗಳಿಗೆ ಮಾತ್ರ ಸೇರಿದ್ದು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಗಾಂಧಿ ಅವರು ಈ ದೇಶ ಎಲ್ಲರಿಗೂ ಸೇರಿದ್ದು ಎಂದು ಪ್ರತಿಪಾದಿಸಿದ್ದರು. ಗಾಂಧೀಜಿ ತತ್ವಗಳನ್ನು ಎತ್ತಿಹಿಡಿಯಬೇಕು ಎಂದು ಕರೆ ನೀಡಿದರು.

ಸಿಎಎ ಮತ್ತು ಎನ್ ಆರ್ ಸಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕಾಯ್ದೆ ಅಸಾಂವಿಧಾನಿಕ ಮಾತ್ರವಲ್ಲದೆ, ಸಾಮಾನ್ಯ ಜನರ ಮೇಲಿನ ಕ್ರೌರ್ಯ ಎಂದು ಟೀಕಿಸಿದರು.

ನಾವೆಲ್ಲರೂ ಭಾರತೀಯರು. ಆದರೂ ಪೌರತ್ವ ಸಾಬೀತುಪಡಿಸಬೇಕು ಎಂದು ಹೇಳುತ್ತಿರುವುದರಲ್ಲಿ ಅರ್ಥವಿಲ್ಲ. ಇದು ದುರದೃಷ್ಟಕರ ಕಾಯ್ದೆ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ಎಚ್.ಸಿ.ಮಹದೇವಪ್ಪ, ಗಾಂಧಿ ವಿಚಾರ ಪರಿಷತ್ತು ಅಧ್ಯಕ್ಷ ಪ.ಮಲ್ಲೇಶ್, ಮೈಸೂರು ವಿ.ವಿ.ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

ಮಧ್ಯಾಹ್ನ ನಡೆಯಲಿರುವ ವಿಚಾರಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್, ಕುಮಾರ್ ಕೇತ್ಕರ್, ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಸೀಮಾ ಮುಸ್ತಫಾ, ಲಕ್ಷ್ಮೀಶ ತೋಳ್ಪಾಡಿ ವಿವಿಧ ವಿಷಯಗಳಲ್ಲಿ ವಿಚಾರ ಮಂಡನೆ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT