ಶನಿವಾರ, ಡಿಸೆಂಬರ್ 5, 2020
25 °C
ಪ್ರಿ ವೆಡ್ಡಿಂಗ್ ಫೋಟೊಶೂಟ್‌ ಪ್ರಕರಣ; ತೆಪ್ಪದ ಮಾಲೀಕರ ವಿರುದ್ಧ ಪ್ರಕರಣ

ತೆಪ್ಪದ ಮಾಲೀಕರೊಂದಿಗೆ ಸಭೆ: ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ತಲಕಾಡಿನ ಮುಡುಕುತೊರೆಯ ಕಾವೇರಿ ನದಿಯಲ್ಲಿ ‘ಪ್ರಿ ವೆಡ್ಡಿಂಗ್ ಫೊಟೊಶೂಟ್‌’ ವೇಳೆ ತೆಪ್ಪ ಮುಳುಗಿ ನವಜೋಡಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ತೆಪ್ಪ ನಡೆಸುತ್ತಿದ್ದ ಕಟ್ಟೇಪುರದ ನಿವಾಸಿ ಮೂಗಪ್ಪ (50) ಎಂಬುವವರ ಮೇಲೆ ಪ್ರಕರಣ ದಾಖಲಿಸಿ, ಅವರ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ. ಇನ್ನುಳಿದ ತೆಪ್ಪಗಳ ಮಾಲೀಕರು ಮತ್ತು ಅಂಬಿಗರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ.

ಈ ಕುರಿತು ‘ಪ್ರಜಾವಾಣಿ’ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಶಿವಕುಮಾರ್ ಅವರನ್ನು ಸಂಪರ್ಕಿ ಸಿದಾಗ ಅವರು, ‘ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕುರಿತು ತೆಪ್ಪದ ಮಾಲೀಕರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಎಲ್ಲರಿಗೂ ಇಂತಹ ಅಜಾಗರೂಕತೆಯ ತೆಪ್ಪ ಚಾಲನೆ, ಫೋಟೊ ತೆಗೆಸಿಕೊಳ್ಳುವುದು ಮತ್ತಿತರ ಕೆಲಸಗಳಿಗೆ ಸಹಕರಿಸಬಾರದು. ಲೈಫ್‌ ಜಾಕೆಟ್ ಸೇರಿದಂತೆ ಅಗತ್ಯ ಇರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಲಾಗುವುದು ಎಂದು ಹೇಳಿದರು.

ಇಂತಹ ಕೃತ್ಯಗಳನ್ನು ತಡೆಯಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ನೀರಾವರಿ ಸೇರಿದಂತೆ ಇತರೆ ಇಲಾಖೆಗಳಿಗೆ ಪತ್ರ ಬರೆಯಲೂ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.