ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.14ರಂದು ಮೆಗಾ ಲೋಕ ಅದಾಲತ್‌

ಜಿಲ್ಲೆಯಲ್ಲಿ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳು 1 ಲಕ್ಷಕ್ಕೂ ಹೆಚ್ಚು
Last Updated 10 ಜುಲೈ 2021, 3:57 IST
ಅಕ್ಷರ ಗಾತ್ರ

ಮೈಸೂರು: 'ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಆ.14ರಂದು ಮೈಸೂರು ನಗರ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಮೆಗಾ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ' ಎಂದು ಪ್ರಧಾನ ಜಿಲ್ಲಾ ಮತ್ತು ಸೆಶೆನ್ಸ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್‌.ರಘುನಾಥ್‌ ತಿಳಿಸಿದರು.

'ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಕಾನೂನು ಪ್ರಕಾರ ರಾಜಿ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಇಬ್ಬರಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಮೆಗಾ ಲೋಕ ಅದಾಲತ್‌ ಆಯೋಜಿಸಲಾಗಿದೆ' ಎಂದು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

'ಮೈಸೂರು ನಗರ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಒಟ್ಟು 1,07,172 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಅವುಗಳಲ್ಲಿ 81,328 ಪ್ರಕರಣಗಳು ರಾಜಿಯಾಗಬಹುದೆಂದು ಅಂದಾಜಿಸಲಾಗಿದೆ. ಕೋವಿಡ್‌ನಿಂದಾಗಿ ಈ ಬಾರಿ ನೇರವಾಗಿ ಹಾಗೂ ವರ್ಚ್ಯು
ವಲ್‌ ವಿಧಾನದ ಮೂಲಕವೂ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ' ಎಂದು ಅವರು ತಿಳಿಸಿದರು.

’ಹಲವು ವರ್ಷಗಳ ಕಾಲ ಹೋರಾಟ ಮಾಡಿ ಒಬ್ಬರು ಗೆಲ್ಲುತ್ತಾರೆ. ಮತ್ತೊಬ್ಬರಿಗೆ ಸೋಲಾಗುತ್ತದೆ. ಆದರೆ, ಅದಾಲತ್‌ನಲ್ಲಿ ಇಬ್ಬರಿಗೂ ತೃಪ್ತಿಯಾ
ಗುವ ತೀರ್ಮಾನ ಮಾಡಲಾಗುತ್ತದೆ. ಈ ಬಾರಿ 10 ಸಾವಿರಕ್ಕೂ ಹೆಚ್ಚು ಪ್ರಕರಣ ಇತ್ಯರ್ಥಪಡಿಸುವ ಗುರಿಯಿದೆ’ ಎಂದು ಹೇಳಿದರು.

’ಲೋಕ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮ
ವಾಗಿರುತ್ತದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ನೇರವಾಗಿಯೂ ಭಾಗವಹಿಸಬಹುದು, ಇಬ್ಬರಿಗೂ ತೃಪ್ತಿಯಾದರೆ ಮಾತ್ರ ಇತ್ಯರ್ಥ ಮಾಡುತ್ತೇವೆ. ಮತ್ತೆ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಕೌಟುಂಬಿಕ ಕಲಹಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು. ಕಳೆದ ಬಾರಿ 29 ದಂಪತಿಗಳ ಪ್ರಕರಣ ಇತ್ಯರ್ಥಪಡಿಸಲಾಗಿತ್ತು’ ಎಂದರು.

ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾಯಾಧೀಶ ದೇವರಾಜ ಭೂತೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT