ಭಾನುವಾರ, ಸೆಪ್ಟೆಂಬರ್ 19, 2021
24 °C
ಸಂಸದ ಪ್ರತಾಪಸಿಂಹಗೆ ನೇರ ಸವಾಲೆಸೆದ ಎಂ.ಲಕ್ಷ್ಮಣ್‌

‘ಮೇಕೆದಾಟು: ಸಿದ್ದರಾಮಯ್ಯ ಕೊಡುಗೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮೇಕೆದಾಟು ಹಾಗೂ ರಾಷ್ಟ್ರೀಯ ಹೆದ್ದಾರಿ 275 ಯೋಜನೆಗಳು ಸಿದ್ದರಾಮಯ್ಯ ಅವರ ಕೊಡುಗೆಗಳು. ಇದು ಸುಳ್ಳೆಂದು ಸಾಬೀತಾದರೆ  ರಾಜಕೀಯದಿಂದ ನಿವೃತ್ತಿಯಾಗುವೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.

‘‍ಯೋಜನೆಗಳು ಬಿಜೆಪಿ ಸರ್ಕಾರದ ಕೊಡುಗೆಗಳು ಎಂದು ಹೇಳಿರುವ ಸಂಸದ ಪ್ರತಾಪ ಸಿಂಹ ಅದನ್ನು ಸಾಬೀತು ಮಾಡದಿದ್ದರೆ ಅವರನ್ನು ಸುಳ್ಳುಗಾರ ಪ್ರತಾಪಸಿಂಹ ಎಂದು ಕರೆಯಬೇಕಾಗುತ್ತದೆ’ ಎಂದು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

‘ಸಿದ್ದರಾಮಯ್ಯ 2017ರಲ್ಲಿ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಿದ್ದರು. 2014ರಲ್ಲಿ ರಾಷ್ಟ್ರೀಯ ಹೆದ್ದಾರಿ 275ಕ್ಕಾಗಿ ಕೇಂದ್ರ ಸಚಿವ ಆಸ್ಕರ್‌ ಫರ್ನಾಂಡೀಸ್‌ ಜತೆ ಮಾತುಕತೆ ನಡೆಸಿದ್ದರು’ ಎಂದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮಾಧ್ಯಮ ವಕ್ತಾರ ಮಹೇಶ್, ಕೆಪಿಸಿಸಿ ಸದಸ್ಯ ಶ್ರೀನಾಥ್‌ಬಾಬು, ಗ್ರಾಮಾಂತರ ಯೂತ್ ಕಾಂಗ್ರೆಸ್‌ ಅಧ್ಯಕ್ಷ ಡೊನಾಲ್ಡ್, ನಗರ ಸೇವಾ ದಳ ಅಧ್ಯಕ್ಷ ಗಿರೀಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು