ಸೋಮವಾರ, ಡಿಸೆಂಬರ್ 6, 2021
23 °C

ಮೈಸೂರು: ಪರಿಷತ್ ಚುನಾವಣೆಯ ನಾಮಪತ್ರ ಪುರಸ್ಕೃತ– ಕಾಂಗ್ರೆಸ್‌ ಅಭ್ಯರ್ಥಿ ನಿರಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಅವರ ನಾಮಪತ್ರ ಪುರಸ್ಕೃತಗೊಂಡಿದೆ.

ಕಾಂಗ್ರೆಸ್‌ ಅಭ್ಯರ್ಥಿ ಸಲ್ಲಿಸಿರುವ ನಾಮಪತ್ರದಲ್ಲಿ ದೋಷವಿದೆ ಎಂದು ಬಿಜೆಪಿ ಅಭ್ಯರ್ಥಿ ಆರ್‌.ರಘು (ಕೌಟಿಲ್ಯ) ಆಕ್ಷೇಪಣೆ ಸಲ್ಲಿಸಿದ್ದರು. ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರು ಗುರುವಾರ ಎರಡೂ ಕಡೆಯವರ ವಾದ ಆಲಿಸಿ, ನಾಮಪತ್ರ ಕ್ರಮಬದ್ಧವಾಗಿರುವುದಾಗಿ ಪ್ರಕಟಿಸಿದರು.

‘ಬಿಜೆಪಿ ಅಭ್ಯರ್ಥಿಯು ಮೂರು ಆಕ್ಷೇಪಣೆಗಳನ್ನು ಎತ್ತಿದ್ದು, ಚುನಾವಣಾಧಿಕಾರಿ ಎಲ್ಲವನ್ನೂ ತಿರಸ್ಕರಿಸಿದ್ದಾರೆ. ನಮ್ಮ ಅಭ್ಯರ್ಥಿಯ ನಾಮಪತ್ರವನ್ನು ಅಂಗೀಕರಿಸಿದ್ದಾರೆ’ ಎಂದು ಕಾಂಗ್ರೆಸ್‌ ಅಭ್ಯರ್ಥಿ ಪರ ವಾದ ಮಂಡಿಸಿದ ಹೈಕೋರ್ಟ್‌ನ ಹಿರಿಯ ವಕೀಲ ಎ.ಎಸ್.‌ ಪೊನ್ನಣ್ಣ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು