ಮಂಗಳವಾರ, ನವೆಂಬರ್ 24, 2020
22 °C

ಹಸಿರು ಪಟಾಕಿ ಎಂದರೇನು ಎಂಬುದು ನನಗೂ ಗೊತ್ತಿಲ್ಲ: ಸಚಿವ ಡಾ.ಕೆ.ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಹಸಿರು ಪಟಾಕಿ ಎಂದರೇನು ಎಂಬುದು ನನಗೂ ಗೊತ್ತಿಲ್ಲ. ಈ ಬಗ್ಗೆ ತಿಳಿದುಕೊಂಡು ಹೇಳುತ್ತೇನೆ’ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಬುಧವಾರ ಇಲ್ಲಿ ಹೇಳಿದರು.

‘ದೀಪಾವಳಿಯಲ್ಲಿ ಪಟಾಕಿ‌ ನಿಷೇಧದ ಬಗ್ಗೆ ನಮ್ಮ ಇಲಾಖೆಯಿಂದ ತಜ್ಞರು ಮಾರ್ಗಸೂಚಿ ಸಿದ್ಧಪಡಿಸಿದ್ದರು. ಅದನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಸಲ್ಲಿಸಿದ್ದೆ. ಆ ನಂತರ ಮುಖ್ಯಮಂತ್ರಿ, ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ ನೀಡಿದ್ದಾರೆ. ಸಮಯ ಕೂಡ ನಿಗದಿ ಮಾಡಿದ್ದಾರೆ. ಆದರೆ, ಹಸಿರು ಪಟಾಕಿ ಎಂದರೇನು ಎಂಬುದು ನನಗೂ ಗೊತ್ತಿಲ್’ ಎಂದರು.

‘15 ದಿನಗಳ ಹಿಂದೆ ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಶೇ 19 ರವರೆಗೆ ಇತ್ತು. ಅದೀಗ  ಶೇ 2ಕ್ಕೆ ತಗ್ಗಿದೆ. ಮರಣ ಪ್ರಮಾಣವೂ ಕಡಿಮೆ ಆಗಿದೆ’ ಎಂದು ಹೇಳಿದರು.

ಜನಸಾಮಾನ್ಯರು ಮಾಸ್ಕ್ ಧರಿಸದೆ ಇದ್ದರೆ ದಂಡ ವಿಧಿಸುತ್ತಿದ್ದು, ರಾಜಕೀಯ ಸಮಾರಂಭಗಳಲ್ಲಿ ನಿಯಮ ಉಲ್ಲಂಘನೆ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ನಾನೂ ಅಸಹಾಯಕ ಎಂದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು