ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು:ಟ್ರಾಮ ಕೇರ್ ಸೆಂಟರ್ ಪರಿಶೀಲಿಸಿದ ಸಚಿವ ಎಸ್.ಟಿ.ಸೋಮಶೇಖರ್

ರಸ್ತೆ ಕಾಮಗಾರಿಗೆ ಉಸ್ತುವಾರಿ ಸಚಿವರಿಂದ ಚಾಲನೆ
Last Updated 5 ನವೆಂಬರ್ 2020, 2:03 IST
ಅಕ್ಷರ ಗಾತ್ರ

ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಕೆ.ಆರ್.ಎಸ್ ರಸ್ತೆಯ ಪಿ.ಕೆ.ಟಿ.ಬಿ ಆಸ್ಪತ್ರೆ ಆವರಣದಲ್ಲಿರುವ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ, ನೂತನವಾಗಿ ಸ್ಥಾಪಿಸಿರುವ ಟ್ರಾಮ ಕೇರ್ ಸೆಂಟರ್ ಪರಿಶೀಲಿಸಿದರು.

ಟ್ರಾಮ ಸೆಂಟರ್ 45 ವೆಂಟಿಲೇಟರ್ ಮತ್ತು 250 ಆಕ್ಸಿಜನ್ ಬೆಡ್ ವ್ಯವಸ್ಥೆ ಒಳಗೊಂಡಿದೆ. ಕೆ.ಆರ್ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ನಿರ್ಮಾಣ ಮಾಡಲಾಗಿದ್ದ ಈ ಸೆಂಟರ್ ಅತ್ಯಾಧುನಿಕ ಸೌಕರ್ಯಗಳನ್ನು ಒಳ ಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾದರೆ ಟ್ರಾಮ ಸೆಂಟರ್‌ಅನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಪಿ.ಕೆ.ಟಿ.ಬಿ ಆಸ್ಪತ್ರೆ ವೈದ್ಯರಾದ ಡಾ.ವಿರೂಪಾಕ್ಷ ಅವರು ಮಾಹಿತಿ ನೀಡಿದರು.

ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಇನ್ನಿತರರು ಉಪಸ್ಥಿತರಿದ್ದರು.

ರಸ್ತೆ ಕಾಮಗಾರಿಗೆ ಚಾಲನೆ: ಲೋಕೋ ಪಯೋಗಿ ಇಲಾಖೆ ಅನುದಾನದಲ್ಲಿ ಕೆಆರ್‌ಎಸ್‌ ಮುಖ್ಯರಸ್ತೆಯಿಂದ ಲೋಕನಾಯಕ ನಗರದ ಸಂಜೀವಿನಿ ಸರ್ಕಲ್‌ ಹಾಗೂ ಬಸವನಗುಡಿ ಮುಖಾಂತರ ಕುವೆಂಪು ಸರ್ಕಲ್‌ನಿಂದ ಸೂರ್ಯ ಬೇಕರಿ ಸರ್ಕಲ್‌ವರೆಗೆ ಕೈಗೊಳ್ಳಲು ಉದ್ದೇಶಿಸಿರುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಚಿವರು ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT