ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ

Last Updated 14 ಡಿಸೆಂಬರ್ 2020, 8:30 IST
ಅಕ್ಷರ ಗಾತ್ರ

ಮೈಸೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಲ್ಲಿನ ಕೆಎಸ್ಆರ್‌ಟಿಸಿ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಸೋಮವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಯಾಣಿಕರನ್ನು ಮಾತನಾಡಿಸಿದ ಅವರು, ಮುಷ್ಕರದಿಂದ ತೊಂದರೆಯಾಗಿದೆ ನಿಜ. ಈಗ ಧೈರ್ಯ ವಾಗಿ ಪ್ರಯಾಣ ಮಾಡಿ ಎಂದು ಹೇಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತಪರ ಹೋರಾಟವನ್ನು ಮಾಡಿಕೊಂಡಿರಲಿ. ಅದುಬಿಟ್ಟು ಎಲ್ಲ ಕಡೆ ಮೂಗುತೂರಿಸಬಾರದು. ಅವರು ಯಾವ ನಾಟಕವಾಡಿದರೂ ಜನಕ್ಕೆ ಅರ್ಥವಾಗುತ್ತದೆ. ಅವರು ತಮ್ಮ ಡ್ರಾಮಾಗಳನ್ನು ಬಿಟ್ಟು 9 ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿರುವುದಕ್ಕೆ ಅಭಿನಂದನೆ ಸೂಚಿಸಬೇಕಿತ್ತು. ಅದು ಬಿಟ್ಟು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಹೋರಾಟ ಮಾಡುವಂತೆ ಮಾಡುವುದು ಸರಿಯೇ? ಎಂದು ಪ್ರಶ್ನಿಸಿದರು.

ಲಾಕ್ ಡೌನ್ ಸಮಯದಲ್ಲಿ ಆದಾಯ ಇರದಿದ್ದರೂ ಸರ್ಕಾರವೇ ವೇತನ ನೀಡಿರುವುದನ್ನು ಮರೆಯಬಾರದು ಎಂದರು.
ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು 4 ಕಂದಾಯ ವಿಭಾಗಗಳಲ್ಲಿ ಸಭೆ ನಡೆಸಿ ರೈತರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಒಕ್ಕೂಟದ ಮುಖಂಡರ ಸಭೆ

ಮೈಸೂರು: ಕೆ ಎಸ್ ಆರ್ ಟಿ ಸಿ ನೌಕರರ ಒಕ್ಕೂಟದ ಮುಖಂಡರು ಇಲ್ಲಿ ಸೋಮವಾರ ಸಭೆ ನಡೆಸಿ ಮುಷ್ಕರ ಸಂಬಂಧ ಚರ್ಚೆ ನಡೆಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ತೀರ್ಮಾನಕ್ಕೆ ಬದ್ದವಾಗಿರುವುದಾಗಿ ಹಲವು ಮುಖಂಡರು ತಿಳಿಸಿದ್ದಾರೆ. ಆದರೆ ಕೆ ಎಸ್ ಆರ್ ಟಿ ಸಿ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಡಿಪೊಗಳಿಂದ ಬಸ್ ಗಳು ನಿಲ್ದಾಣಗಳಿಗೆ ಬರುತ್ತಿವೆ.

ಬಸ್‌ಗಳಿಗೆ ಕಲ್ಲು ತೂರಾಟ

ಮೈಸೂರು: ಪಿರಿಯಾಪಟ್ಟಣದಿಂದ ಬೆಟ್ಟದಪುರಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮೇಲೆ ಸೀಗೂರು ಬಳಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಬಸ್ ನಲ್ಲಿ 26 ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿಇದ್ದರು. ಹಿಂಭಾಗದಿಂದ ಕಲ್ಲು ತೂರಿದ್ದು ಗಾಜುಗಳು ಪುಡಿಪುಡಿಯಾಗಿವೆ ಎಂದು ಬೆಟ್ಟದಪುರ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT