ಮಂಗಳವಾರ, ಅಕ್ಟೋಬರ್ 20, 2020
25 °C

ರಾಜವಂಶಸ್ಥರ ಸಹಕಾರ ಕೋರಿದ ಸಚಿವ ಎಸ್‌.ಟಿ.ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಶುಕ್ರವಾರ ಅರಮನೆಗೆ ತೆರಳಿ  ರಾಜವಂಶಸ್ಥರನ್ನು ಭೇಟಿಯಾದರು. 

ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರಿಗೆ ಫಲ ತಾಂಬೂಲ ನೀಡಿದ ಅವರು ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು. 

‘ಪ್ರತಿವರ್ಷದಂತೆ ದಸರಾ ಕಾರ್ಯ ಕ್ರಮಗಳಿಗೆ ಈ ಬಾರಿಯೂ ಸಂಪೂರ್ಣ ಸಹಕಾರ ನೀಡುತ್ತೇವೆ. ಕೋವಿಡ್ ಕಾರಣ ಎಚ್ಚರ ವಹಿಸಬೇಕು’ ಎಂದು ಪ್ರಮೋದಾದೇವಿ ಸಲಹೆ ನೀಡಿದರು.

ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌.ಸುಬ್ರಮಣ್ಯ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು