ಮಂಗಳವಾರ, ನವೆಂಬರ್ 19, 2019
27 °C
2 ಪ್ರತ್ಯೇಕ ಪ್ರಕರಣಗಳಲ್ಲಿ ಶಿಕ್ಷೆ ಪ್ರಕಟ

ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿದಾತನಿಗೆ ಶಿಕ್ಷೆ

Published:
Updated:

ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ವ್ಯಕ್ತಿಗಳಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

7 ವರ್ಷದ ಬಾಲಕಿಯೊಬ್ಬಳಿಗೆ ಕೆ.ಎಂ.ಗಿರೀಶ (36) ಎಂಬಾತ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಹಾಗೂ ತನ್ನ ಬೆತ್ತಲೆ ದೇಹ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದೆ.

ಬಾಲಕಿಯು ಗಿರೀಶನ ವರ್ತನೆಯನ್ನು ತಾಯಿಯ ಗಮನಕ್ಕೆ ತಂದಾಗ ಅವರು ಪೊಲೀಸರಿಗೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಅಂಗಡಿಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಗೆ ಶಿಕ್ಷೆ

ಎರಡೂವರೆ ವರ್ಷಗಳ ಹಿಂದೆ 8 ವರ್ಷದ ಬಾಲಕಿಯೊಬ್ಬಳು ತಂದೆಗೆ ಬೀಡಿ ತರಲು ಅಂಗಡಿಗೆ ಹೋಗುತ್ತಿದ್ದಾಗ ಅಡ್ಡಗಟ್ಟಿ ಬೇಲಿಯ ಬಳಿಗೆ ಎಳೆದೋಯ್ದು ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಸುರೇಶ್‌ ಎಂಬಾತನಿಗೆ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ 3 ವರ್ಷ ಜೈಲು ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದ್ದಾರೆ.

ಎರಡೂ ಪ್ರಕರಣಗಳಲ್ಲೂ ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಸಿ.ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.

 

ಪ್ರತಿಕ್ರಿಯಿಸಿ (+)