ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ: 1,645 ಮನೆಗಳಿಗೆ ಹಾನಿ

Last Updated 6 ಆಗಸ್ಟ್ 2022, 14:00 IST
ಅಕ್ಷರ ಗಾತ್ರ

ಮೈಸೂರು: ‘ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ 1,645 ಮನೆಗಳಿಗೆ ಹಾನಿಯಾಗಿದೆ. ಹುಣಸೂರು ತಾಲ್ಲೂಕಿನಲ್ಲಿ ಮಹಿಳೆ ಮೃತಪಟ್ಟಿದ್ದಾರೆ. 7 ಜಾನುವಾರು ಸಾವಿಗೀಡಾಗಿವೆ. ಸಂತ್ರಸ್ತರಿಗೆ ಪರಿಹಾರ ವಿತರಣೆ ಕಾರ್ಯ ಪ್ರಗತಿಯಲ್ಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಶನಿವಾರ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಮನೆ ಹಾನಿಯಾದವರಿಗೆ ₹ 5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಆ.7ರಂದು ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಪರಿಹಾರವನ್ನು ತ್ವರಿತವಾಗಿ ವಿತರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಇದಕ್ಕಾಗಿ ₹ 15 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಮನೆಗಳಿಗೆ ಹಾನಿ ಮಾಹಿತಿ

ತಾಲ್ಲೂಕು; ಸಂಖ್ಯೆ

ಪಿರಿಯಾಪಟ್ಟಣ;500

ಹುಣಸೂರು;300

ಎಚ್‌.ಡಿ.ಕೋಟೆ;250

ಕೆ.ಆರ್.ನಗರ;175

ಸರಗೂರು;250

ಮೈಸೂರು;80

ನಂಜನಗೂಡು;60

ತಿ.ನರಸೀಪುರ;30

ಒಟ್ಟು;1,645

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT