ಶುಕ್ರವಾರ, ಅಕ್ಟೋಬರ್ 22, 2021
21 °C

​ಮೈಸೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ- ತಾಯಿ, ಮಗ ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ದಟ್ಟಗಳ್ಳಿ ಸಮೀಪದ ರಾಜರಾಜೇಶ್ವರಿನಗರ ರಿಂಗ್‌ರಸ್ತೆ ಜಂಕ್ಷನ್‌ನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಟ್ಟಗಳ್ಳಿ ನಿವಾಸಿ ಗುಣಲಕ್ಷ್ಮೀ (35) ಹಾಗೂ ಇವರ ಪುತ್ರ ದೈವಿಕ್ (12) ಮೃತಪಟ್ಟವರು. ಕಾರನ್ನು ಚಾಲನೆ ಮಾಡುತ್ತಿದ್ದ ಗುಣಲಕ್ಷ್ಮಿ ಅವರ ಪತಿ ಜಗದೀಶ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

‘ಇವರು ಕುಶಾಲನಗರದಿಂದ ತಮ್ಮ ನಿವಾಸಕ್ಕೆ ತೆರಳುವಾಗ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಒಂದು ಏರ್‌ಬ್ಯಾಗ್‌ ತೆರೆದುಕೊಂಡಿದ್ದರಿಂದ ಜಗದೀಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಟೈರ್‌ಗಳು ಸಿಡಿದಿವೆ. ವಾಹನ ನಜ್ಜುಗುಜ್ಜಾಗಿದೆ. ಅಪಘಾತ ನಡೆದಾಗ ಆ ಭಾಗದಲ್ಲಿ ಮಳೆ ಸುರಿಯುತ್ತಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು